newsics.com
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ.ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ ಮಾಡುವುದಾಗಿ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆಜಿಎಫ್‌ನಲ್ಲಿ ESI ಆಸ್ಪತ್ರೆ ಉನ್ನತೀಕರಣಗೊಳಿಸುವುದಾಗಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಿಸಲಾಗುತ್ತದೆ. 100 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುತ್ತದೆ. ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ AI ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಚಿತ್ರದುರ್ಗದಲ್ಲಿ ಕೃಷಿ ಉದ್ದಿಮೆ ತರಬೇತಿ ಕೇಂದ್ರ ಉನ್ನತೀಕರಣಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ 2026ರ ಬಜೆಟ್ನಲ್ಲಿ ಘೋಷಿಸಿದ್ದಾರೆ.
KARNATAKA BUDGET 2026 ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ : ಸಿದ್ದರಾಮಯ್ಯ