Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Budget 2026 ಸಮಾಜಕಲ್ಯಾಣ, ಹಿಂದುಳಿದ, ಅಲ್ಪಸಂಖ್ಯಾತರಿಗೆ ಬಂಪರ್
ಕರ್ನಾಟಕಪ್ರಮುಖ

Karnataka Budget 2026 ಸಮಾಜಕಲ್ಯಾಣ, ಹಿಂದುಳಿದ, ಅಲ್ಪಸಂಖ್ಯಾತರಿಗೆ ಬಂಪರ್

Share
4 Min Read
SHARE

ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಯೋಜನೆ ಜಾರಿಗೆ ನಿರ್ಧಾರ ಮಾಡಲಾಗಿದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಿಸಲಾಗುವುದು. ಧನಶ್ರೀ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಲಾಗುವುದು. 30 ಸಾವಿರ ರೂಪಾಯಿಯಿಂದ 45 ಸಾವಿರ ರೂ.ಗೆ ಹೆಚ್ಚಳ ಮಾಡಲಾಗುವುದು.18 ವರ್ಷದ ಮಕ್ಕಳಿಗಾಗಿ ಮಾದಕ ವ್ಯಸನಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಹೊಸ ಕೈಗಾರಿಕಾ ನೀತಿ 2025-30ರಡಿ ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅತಿ ಹಿಂದುಳಿದ ಪ್ರದೇಶಗಳಿಗೆ ಶೇ.5ರಷ್ಟು ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುವುದು, ಹಿಂದುಳಿದ ಪ್ರದೇಶಗಳಿಗೆ ಶೇ.3ರಷ್ಟು ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುವುದು, ಬೆಂಗಳೂರಿನಿಂದಾಚೆಯೂ ಕೈಗಾರಿಕಾಭಿವೃದ್ಧಿಯನ್ನ ಉತ್ತೇಜಿಸುವ ಗುರಿ ಹೊಂದಲಾಗಿದೆ. ಹೂಡಿಕೆಗೆ ಪೂರಕವಾಗುವಂತೆ ಸುಲಲಿತವಾಗಿ ಉದ್ಯಮ ನಡೆಸಲು ಕ್ರಮ ಕೈಗೊಳ್ಳಲಾಗುವುದು.
ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರಲಾಗುವುದು, ವಾಯುಯಾನ ಹಾಗೂ ಜಲಸಾಹಸ ಯೋಜನೆ ಅನುಷ್ಠಾನಗೊಳಿಸಲಾಗುವುದು. ಸೀ ಪ್ಲೇನ್, ಹೆಲಿಟ್ಯಾಕ್ಸಿ, ಜಾಯ್ ರೈಡ್, ರಿವರ್ ಕ್ರೂಸ್ಗೆ ಪ್ರೋತ್ಸಾಹ ನೀಡಲಾಗುತ್ತದೆ. ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ, ಪೊಲೀಸರಿಗೆ ಕೌಶಲ್ಯ ತರಬೇತಿ ನೀಡಲಾಗುವುದು. ಗದಗ-ಕಪ್ಪತ್ತಗುಂಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅಭಿವೃದ್ಧಿಗೊಳಿಸಲಾಗುವುದು, ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿ ಕೈಮರದವರೆಗೆ ರೋಪ್ ವೇ ನಿರ್ಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸಮಾಜಕಲ್ಯಾಣ, ಹಿಂದುಳಿದ ಹಾಗು ಅಲ್ಪಸಂಖ್ಯಾತ ಕಲ್ಯಾಣ ವರ್ಗಗಳ ಖಾಲಿ ಇರುವ 2500 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತೆ ಎಂದರು.
ಇನ್ನು ವಿಶ್ವವಿದ್ಯಾಲಯಗಳಲ್ಲಿ ಜಾತಿ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿ ಮಾಡಲಾಗುವುದು ಅಲ್ಲದೇ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಅನುದಾನ ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ ಘೋಷಣೆ ಮಾಡಿದ್ದು ಆದರೆ ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಅನುದಾನ ಘೋಷಣೆ ಮಾಡಲಿಲ್ಲ.
ಮದ್ಯದ ಅಂಶ ಆದರಿಸಿ ತೆರಿಗೆ ವಿಧಿಸಲು ರಾಜ್ಯ ಸರ್ಕಾರ ಇದೀಗ ನಿರ್ಧರಿಸಿದೆ ಏಕರೂಪ ಅಬಕಾರಿ ಸುಂಕ ಹೆಚ್ಚಳಕ್ಕೆ ತೀರ್ಮಾನಿಸಿದ್ದು ಹಂತ ಹಂತವಾಗಿ ತೆರಿಗೆ ಹೆಚ್ಚಳಕ್ಕೆ ಸರ್ಕಾರ ನಿರ್ಧರಿಸಿದೆ. ಮದ್ಯದ ಬೆಲೆ ನಿಗದಿ ಮಾಡುವ ಜವಾಬ್ದಾರಿ ಉತ್ಪಾದಕರ ಹೆಗಲಿಗೆ ಇದ್ದು, ಮದ್ಯದ ದರ ಏರಿಕೆ ಸುಳಿವು ಇದೀಗ ರಾಜ್ಯ ಸರ್ಕಾರ ಕೊಟ್ಟಿದೆ. ಹಾಗಾಗಿ ಮದ್ಯ ಪ್ರಿಯರಿಗೆ ಇದು ಶಾಕಿಂಗ್ ಸುದ್ದಿ ಅಂತಲೇ ಹೇಳಬಹುದಾಗಿದೆ.
ಶಾಲಾ -ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತೆ 15,000 ಬೋದಕ ಅವಧಿಗಳ ನೇಮಕಾತಿ ಮಾಡಲಾಗುತ್ತೆ 800 ಶಾಲೆಗಳು ಪಬ್ಲಿಕ್ ಶಾಲೆಗಳನ್ನಾಗಿ ಉನ್ನತಿಕರಣಗೊಳಿಸಲಾಗುತ್ತದೆ. ವಿದ್ಯಾ ವಿಕಾಸ ಯೋಜನೆಯ ಅಡಿ ಪೂರ್ವ ಪ್ರಾಥಮಿಕ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ 565 ಕೋಟಿ ವೆಚ್ಚದಲ್ಲಿ ಶಾಲೆಗಳ ದುರಸ್ತಿಗೆ ಕ್ರಮ ಶಾಲೆ ಶೌಚಾಲಯಕ್ಕೆ 75 ಕೋಟಿ ರೂಪಾಯಿ ಮೀಸಲು ಇಡಲಾಗಿದೆ ಶಾಲಾ ಕಾಲೇಜು ನಿರ್ವಹಣೆಗಾಗಿ 125 ಕೋಟಿ ಅನುದಾನ. ಶಿಕ್ಷಕರ ಇಂಗ್ಲಿಷ್ ಭಾಷಾ ತರಬೇತಿಗೆ 24 ಕೋಟಿ ರೂಪಾಯಿ ಎಂಟರಿಂದ ಹನ್ನೆರಡನೇ ತರಗತಿ ಎಐ ಆಧಾರಿತ ಕಲಿಕಾ ಸೌಲಭ್ಯ. ವಿದ್ಯಾರ್ಥಿಗಳ ಒತ್ತಡ ನಿರ್ವಹಣೆಗೆ ನಿವಾರಣೆಗೆ ಆರೋಗ್ಯ ಸಲಹೆಗಾರರನ್ನು ನೇಮಕ ಮಾಡಲಾಗುತ್ತೆ. ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಶಾಲೆಯಲ್ಲಿ ಕಠಿಣ ನಿಯಮ. ಶಿಕ್ಷಕರ ಇಂಗ್ಲಿಷ್ ಭಾಷಾ ತರಬೇತಿಗೆ 24 ಕೋಟಿ ರೂಪಾಯಿ ಮೀಸಲು ಇಡಲಾಗಿದೆ ಎಂದರು.
ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಘೋಷಣೆ ಮಾಡಿದ್ದಾರೆ ಧನಶ್ರೀ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಿದ್ದು 30,000 ರಿಂದ 45,000 ಗಳಿಗೆ ಹೆಚ್ಚಳ ಮಾಡಿದ್ದಾರೆ 20 ಹೊಸ ಶಿಶು ಪಾಲನ ಕೇಂದ್ರ ಸ್ಥಾಪನೆಗೆ ಒಂದು ಕೋಟಿ ರೂಪಾಯಿ ಮೀಸಲು ಇಟ್ಟಿದ್ದಾರೆ ಜಿಲ್ಲಾಮಟ್ಟದಲ್ಲಿ ಸ್ಥಾಪನೆ ಮಾಡಲಾಗುತ್ತದೆ.
ಬೆಂಗಳೂರಿಗೆ ಬಂಪರ್ ಐದು ನಗರ ಪಾಲಿಕೆಗಳಿಗೆ 1,233 ಕೋಟಿ ಮೊತ್ತದ ರಸ್ತೆ 1800 ಕೋಟಿ ವೆಚ್ಚದಲ್ಲಿ 158 ಕಿಲೋಮೀಟರ್ ರಸ್ತೆ ವೈಟ್ ಟ್ಯಾಪಿಂಗ್ 1836 ಕೋಟಿ ವೆಚ್ಚದಲ್ಲಿ ಉಪಮುಖ್ಯ ರಸ್ತೆಗಳ ಅಭಿವೃದ್ಧಿಗೆ 450 ಕೋಟಿ ರೂಪಾಯಿ ರಾಜ ಕಾಲುವೆಗಳ ಮೇಲ್ದರ್ಜೆಗೆ ಏರಿಸಲು 273 ಕೋಟಿ ಮೀಸಲು ಇಡಲಾಗಿದೆ ಎಂದರು.
ಬೆಂಗಳೂರಿನಲ್ಲಿ ಸುರಂಗಮಾರ್ಗ ನಿರ್ಮಾಣಕ್ಕೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದರು ಕೆ ಆರ್ ಪುರಂ ನಿಂದ ಮೈಸೂರು ರಸ್ತೆ ಅವರಿಗೆ 40 ಕಿಲೋಮೀಟರ್ ಸುರಂಗ ಮಾರ್ಗಕ್ಕೆ 40,000 ಕೋಟಿ ವೆಚ್ಚದಲ್ಲಿ ಈ ಒಂದು ಸ್ವರ್ಗ ಮಾರ್ಗ ನಿರ್ಮಾಣವಾಗುತ್ತದೆ ಮೊದಲ ಹಂತದಲ್ಲಿ 17 km ಉದ್ದದ ಉತ್ತರ ಮತ್ತು ದಕ್ಷಿಣ ಕನ್ನಡ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗೂ ಉತ್ತರ ಮತ್ತು ದಕ್ಷಿಣ ನಿರ್ಮಾಣವಾಗುತ್ತದೆ ಈ ಯೋಜನೆಗೆ 17780 ಕೋಟಿ ರೂಪಾಯಿ ಮತಕ್ಕೆ ಟೆಂಡರ್ ಕರೆಯಲಾಗಿದೆ ಎಂದರು.ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂಭ
ಖುಷ್ಕಿ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ರೂಪಾಯಿ
ತರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂಪಾಯಿ ನಿಗದಿ
ತುಂಗಭದ್ರಾ ಜಲಾಶಯದ 33 ಹೊಸ ಗೇಟ್‌ಗಳ ಅಳವಡಿಕೆ
ಟಿಬಿ ಜಲಾಶಯದ ಸಾಮರ್ಥ್ಯ ಹೆಚ್ಚಿಸಲು ಸಮತೋಲನ ಜಲಾಶಯ
ಹನೂರು ತಾಲೂಕಿನಲ್ಲಿ ಅಂತರ್ಜಲ ಹೆಚ್ಚಿಸಲು ಕ್ರಮ
ಭದ್ರಾ ಮೇಲ್ದಂಡೆ ಯೋಜನೆಯಿಂದ 157 ಕೆರೆ ತುಂಬಿಸಲು ಕ್ರಮ
ಕೊರಟಗೆರೆ ತಾಲೂಕಿನಲ್ಲಿ 1.2 ಟಿಎಂಸಿ ಸಾಮರ್ಥ್ಯದ ಜಲಾಶಯ
237 ಕೋಟಿ ವೆಚ್ಚದಲ್ಲಿ 164 ಕೆರೆಗಳ ತುಂಬಿಸುವ ಯೋಜನೆ
ವೃಷಭಾವತಿ ವ್ಯಾಲಿಯಲ್ಲಿ 650ಕೋಟಿ ವೆಚ್ಚದಲ್ಲಿ 119 ಕೆರೆ ಭರ್ತಿ

TAGGED:bumper for backwardminoritiesSocial welfare
Share This Article
Facebook Twitter Copy Link Print
Previous Article Karnataka Budget 2026 ಬಜೆಟ್ ಮಂಡನೆ ವೇಳೆ ಸಿಎಂಗೆ ಉಲ್ಬಣಗೊಂಡ ಕಾಲು ನೋವು; ಸ್ಪೀಕರ್ಗೆ ಮನವಿ ಏನು?
Next Article KARNATAKA BUDGET 2026 ಬಜೆಟ್ ನಲ್ಲಿ ಮೀನುಗಾರರಿಗೆ ಬಂಪರ್ ಘೋಷಣೆ : 20 ಸಾವಿರ ಪ್ರೋತ್ಸಾಹ ಧನ ಏರಿಕೆ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?