Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ರವಿಚಂದ್ರನ್ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ; ಸೌಜನ್ಯದ ಭೇಟಿಯೋ ಅಥವಾ ವಿಶೇಷ ಚರ್ಚೆಯೋ?
ಕರ್ನಾಟಕಪ್ರಮುಖಮನರಂಜನೆ

ನಟ ರವಿಚಂದ್ರನ್ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ; ಸೌಜನ್ಯದ ಭೇಟಿಯೋ ಅಥವಾ ವಿಶೇಷ ಚರ್ಚೆಯೋ?

Share
2 Min Read
SHARE

newsics.com

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸ್ಯಾಂಡಲ್‌ವುಡ್‌ನ ಕನಸುಗಾರ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ರವಿಚಂದ್ರನ್ ಅವರ ಮನೆಗೆ ತೆರಳಿದ ಡಿಸಿಎಂ, ಸುದೀರ್ಘ ಕಾಲ ಕ್ರೇಜಿಸ್ಟಾರ್ ಜೊತೆ ಮಾತುಕತೆ ನಡೆಸಿದ್ದಾರೆ. ಈ ಇಬ್ಬರು ದಿಗ್ಗಜರ ಭೇಟಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಸಾಮಾನ್ಯವಾಗಿ ರಾಜಕಾರಣಿಗಳು ಮತ್ತು ಚಿತ್ರರಂಗದ ಗಣ್ಯರು ಭೇಟಿಯಾದಾಗ ಅಲ್ಲಿ ಹತ್ತಾರು ಊಹಾಪೋಹಗಳು ಏಳುವುದು ಸಹಜ. ಡಿ.ಕೆ. ಶಿವಕುಮಾರ್ ಅವರು ರವಿಚಂದ್ರನ್ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ಈ ಭೇಟಿಯಲ್ಲಿ ಸಿನಿಮಾ ರಂಗದ ಇಂದಿನ ಸ್ಥಿತಿಗತಿ, ಕಲಾವಿದರ ಸಮಸ್ಯೆಗಳು ಹಾಗೂ ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇನ್ನು ಇಬ್ಬರೂ ಬಾಲ್ಯದ ಸ್ನೇಹಿತರಾಗಿದ್ದು,

ರವಿಚಂದ್ರನ್ ಅವರ ಹೊಸಕೆರೆಹಳ್ಳಿಯ ನಿವಾಸದಲ್ಲಿ ನಡೆದ ಈ ಭೇಟಿಯ ಫೋಟೋಗಳು ಈಗ ವೈರಲ್ ಆಗುತ್ತಿವೆ. ಡಿ.ಕೆ. ಶಿವಕುಮಾರ್ ಅವರನ್ನು ರವಿಚಂದ್ರನ್ ಆತ್ಮೀಯವಾಗಿ ಬರಮಾಡಿಕೊಂಡರು. ಹಿರಿಯ ನಟನ ಆರೋಗ್ಯ ಮತ್ತು ಅವರ ಮುಂದಿನ ಚಿತ್ರಗಳ ಬಗ್ಗೆ ಡಿಸಿಎಂ ವಿಚಾರಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಮೊದಲಿನಿಂದಲೂ ಚಿತ್ರರಂಗದ ಕಲಾವಿದರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅದರಲ್ಲೂ ರವಿಚಂದ್ರನ್ ಮತ್ತು ಡಿ.ಕೆ. ಶಿವಕುಮಾರ್ ಒಂದೇ ಸ್ಕೂಲಿನಲ್ಲಿ ಓದಿದ್ದಾರೆ. ಇಬ್ಬರ ಒಡನಾಟವೂ ಆತ್ಮೀಯವಾಗಿದ್ದು, ಎಲ್ಲಿಯೇ ಸಿಕ್ಕಿದರೂ ಆತ್ಮೀಯತೆಯಿಂದಲೇ ಮಾತನಾಡುತ್ತಾರೆ. ಇದೀಗ ರವಿಚಂದ್ರನ್ ಮನೆಗೆ ಹೋಗಿರುವುದಕ್ಕೆ ಕಾರಣ ಏನು ಎಂಬುದನ್ನು ಸುಲಭವಾಗಿ ಊಹಿಸಲಾಗುವುದಿಲ್ಲ.

ಸದ್ಯ ಕನ್ನಡ ಚಿತ್ರರಂಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಚಿತ್ರಮಂದಿರಗಳ ಸಮಸ್ಯೆ, ಪೈರಸಿ ಮತ್ತು ಕಲಾವಿದರ ಸಂಘದ ಕೆಲವು ವಿಚಾರಗಳ ಬಗ್ಗೆ ರವಿಚಂದ್ರನ್ ಅವರು ಡಿಸಿಎಂ ಗಮನಕ್ಕೆ ತಂದಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಸರ್ಕಾರದ ಮಟ್ಟದಲ್ಲಿ ಚಿತ್ರರಂಗಕ್ಕೆ ಸಿಗಬೇಕಾದ ಪ್ರೋತ್ಸಾಹ ಮತ್ತು ಸೌಲಭ್ಯಗಳ ಬಗ್ಗೆ ಕ್ರೇಜಿಸ್ಟಾರ್ ಸಲಹೆ ನೀಡಿರುವ ಸಾಧ್ಯತೆ ಇದೆ.

ಡಿ.ಕೆ. ಶಿವಕುಮಾರ್ ಅವರು ಕೇವಲ ರಾಜಕಾರಣಿಯಾಗಿ ಮಾತ್ರವಲ್ಲದೆ, ಕಲಾ ಪೋಷಕರಾಗಿಯೂ ಗುರುತಿಸಿಕೊಂಡವರು. ಈ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ, ಇದು ಕೇವಲ ಸೌಜನ್ಯದ ಭೇಟಿ ಎಂದು ಡಿಕೆಶಿ ಆಪ್ತ ಮೂಲಗಳು ತಿಳಿಸಿವೆ.

ಮತ್ತೊಬ್ಬ ಹೀರೋ ಮದುವೆಗೆ ರೆಡಿ: ಯಾರು ಈ ಬೆಲ್ಲಂಕೊಂಡ?

TAGGED:D.K. Shivakumar's visit to actor Ravichandran's house; Courtesy visit or special discussion?
Share This Article
Facebook Twitter Copy Link Print
Previous Article ಮತ್ತೊಬ್ಬ ಹೀರೋ ಮದುವೆಗೆ ರೆಡಿ: ಯಾರು ಈ ಬೆಲ್ಲಂಕೊಂಡ?
Next Article ಉಚಿತ ಸೀರೆಗಾಗಿ ನಾ ಮುಂದು ತಾ ಮುಂದು ಮುಗಿಬಿದ್ದ ಮಹಿಳೆಯರು

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?