Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ‘ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌: 24 ಗಂಟೆಯಲ್ಲಿ 8 ಕೋಟಿ ರೂ. ಬೆಲೆಯ ಟಿಕೆಟ್ ಸೇಲ್
ಪ್ರಮುಖಮನರಂಜನೆ

‘ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌: 24 ಗಂಟೆಯಲ್ಲಿ 8 ಕೋಟಿ ರೂ. ಬೆಲೆಯ ಟಿಕೆಟ್ ಸೇಲ್

Share
2 Min Read
SHARE

newsics.com

ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧಾರ್ ಕಾಂಬಿನೇಶನ್‌ನ ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಲು ಸಿದ್ಧವಾಗಿದೆ. ಮಾರ್ಚ್ 19ರಂದು ಚಿತ್ರ ವಿಶ್ವದಾದ್ಯಂತ ಬಿಡುಗಡೆ ಆಗಲಿದ್ದು, ಮಾರ್ಚ್ 18ರಂದೇ ಪೇಯ್ಡ್ ಪ್ರೀಮಿಯರ್ ಶೋಗಳು ನಡೆಯಲಿವೆ.

ಶನಿವಾರ (ಮಾರ್ಚ್ 7) ಚಿತ್ರದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಆರಂಭವಾದ ಮುಂಗಡ ಟಿಕೆಟ್ ಬುಕ್ಕಿಂಗ್‌ನಲ್ಲಿ ಈ ಸಿನಿಮಾ ಅಬ್ಬರದ ಸಾಧನೆ ಮಾಡಿದೆ. ಬುಕ್ಕಿಂಗ್ ಆರಂಭವಾದ ಕೇವಲ 24 ಗಂಟೆಗಳಲ್ಲಿ 87,000 ಟಿಕೆಟ್‌ಗಳು ಮಾರಾಟವಾಗಿವೆ.

ಪ್ರಮುಖ ಟಿಕೆಟ್ ಬುಕಿಂಗ್ ಪ್ಲಾಟ್‌ಫಾರ್ಮ್ ಆದ ‘ಬುಕ್‌ ಮೈ ಶೋ’ ಒಂದರಲ್ಲೇ 87.81 ಸಾವಿರ ಟಿಕೆಟ್‌ಗಳು ಮಾರಾಟ ಆಗಿರುವುದು ಚಿತ್ರದ ಮೇಲಿರುವ ನಿರೀಕ್ಷೆಯನ್ನು ತೋರಿಸುತ್ತದೆ. ಟ್ರೇಡ್ ವಿಶ್ಲೇಷಕ ತರಣ್ ಆದರ್ಶ್ ಅವರ ಪ್ರಕಾರ, ಪ್ರತಿ ಗಂಟೆಗೆ ಸರಾಸರಿ 7,500 ಟಿಕೆಟ್‌ಗಳು ಮಾರಾಟವಾಗುತ್ತಿವೆ. ಇದರಿಂದಾಗಿ ಬುಕಿಂಗ್ ಶುರುವಾದ ಮೊದಲ ಎರಡು ಗಂಟೆಯಲ್ಲೇ 4 ಕೋಟಿ ಕಲೆಕ್ಷನ್ ಆಗಿದೆ.

Sacnilk ವರದಿಯ ಪ್ರಕಾರ, ಬುಕ್ಕಿಂಗ್ ಆರಂಭವಾದ ಕೇವಲ ಎರಡು ಗಂಟೆಗಳಲ್ಲಿ ಚಿತ್ರವು ವಿಶ್ವದಾದ್ಯಂತ 4 ಕೋಟಿ ರೂಪಾಯಿ ಗಳಿಸಿದೆ. ಇದರಲ್ಲಿ ಪಿವಿಆರ್, ಐನಾಕ್ಸ್ ಮತ್ತು ಸಿನಿಪೊಲಿಸ್‌ನಂತಹ ದೊಡ್ಡ ಮಲ್ಟಿಪ್ಲೆಕ್ಸ್ಗಳಿಂದಲೇ 2.50 ಕೋಟಿ ರೂಪಾಯಿ ಹರಿದುಬಂದಿದೆ. ದೆಹಲಿ-ಎನ್‌ಸಿಆರ್‌ನಂತಹ ನಗರಗಳಲ್ಲಿ ‘ಸೂಪರ್ ಬ್ಲಾಕ್‌ಬಸ್ಟರ್ ಪ್ಲಸ್’ ಎಂಬ ಹೊಸ ಪ್ರೀಮಿಯಂ ಕೆಟಗರಿ ಪರಿಚಯಿಸಲಾಗಿದ್ದು, ಅಲ್ಲಿ ಟಿಕೆಟ್ ದರ 2,500 ರೂಪಾಯಿ ವರೆಗೂ ಇದೆ.

ಮಾರ್ಚ್ 18ರಂದು ನಡೆಯಲಿರುವ ಪೇಯ್ಡ್ ಪ್ರೀಮಿಯರ್ ಶೋಗಳಿಂದ ಈಗಾಗಲೇ ಚಿತ್ರವು 8.06 ಕೋಟಿ ರೂಪಾಯಿ ಸಂಗ್ರಹಿಸಿದೆ. ಹಿಂದಿ ವರ್ಷನ್ನಿಂದ 7 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ. ತೆಲುಗಿನಿಂದ 5 ಲಕ್ಷ ರೂ., ತಮಿಳಿನಿಂದ 4 ಲಕ್ಷ ರೂ. ಹಾಗೂ ಕನ್ನಡದಿಂದ 28,000 ರೂಪಾಯಿ ಕಲೆಕ್ಷನ್ ಆಗಿದೆ. ಇದು ಪೇಯ್ಡ್ ಪ್ರೀಮಿಯರ್ಗೆ ಈವರೆಗೂ ಆಗಿರುವ ಕಲೆಕ್ಷನ್ ಲೆಕ್ಕ ಮಾತ್ರ. ಮೊದಲ ದಿನದ ಕಲೆಕ್ಷನ್ ಇನ್ನೂ ಜಾಸ್ತಿ ಆಗಲಿದೆ.

‘ಧುರಂಧರ್’ ಮೊದಲ ಭಾಗವು ಭಾರತದಲ್ಲಿ 28 ಕೋಟಿ ರೂಪಾಯಿಗಳ ಭರ್ಜರಿ ಓಪನಿಂಗ್ ಪಡೆದಿತ್ತು ಮತ್ತು ಒಟ್ಟಾರೆ ವಿಶ್ವದಾದ್ಯಂತ 1303.35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಇತಿಹಾಸ ನಿರ್ಮಿಸಿತ್ತು. ಈಗ ಎರಡನೇ ಭಾಗವು ಆ ಎಲ್ಲಾ ದಾಖಲೆಗಳನ್ನು ಅಳಿಸಿಹಾಕುವ ಮುನ್ಸೂಚನೆ ನೀಡಿದೆ. ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಸಂಜಯ್ ದತ್, ಅರ್ಜುನ್ ರಾಮ್ಪಾಲ್, ಸಾರಾ ಅರ್ಜುನ್ ಮತ್ತು ರಾಕೇಶ್ ಬೇಡಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Tamilnadu Election : ಸ್ತ್ರೀಯರಿಗೆ ₹2500, ಮದ್ವೆಗೆ ಚಿನ್ನ, ಫ್ರೀ ಎಲ್‌ಪಿಜಿ; ವಿಜಯ್ ನೀಡಿದ ಭರವಸೆಗಳೇನು?

TAGGED:'Dhurandhar 2' advance booking: Rs 8 crore worth of tickets sold in 24 hours
Share This Article
Facebook Twitter Copy Link Print
Previous Article ಸಭೆಗೆ ಕೇವಲ 5 ನಿಮಿಷ ತಡವಾಗಿ ಬಂದಿದ್ದಕ್ಕೆ ದೇಶದ ಜನತೆಗೆ ಕ್ಷಮೆಯಾಚಿಸಿದ ಜಪಾನ್ ಸಚಿವೆ
Next Article ಸುದೀಪ್ ನಟ ಆದ ಮಾತ್ರಕ್ಕೆ ಅವರ ತಲೆ ಮೇಲೆ ಕೊಂಬು ಇರುತ್ತಾ?; ಡಾಗ್ ಸತೀಶ್ ಕಿಡಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?