Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್‌ಸ್ಟಾಗ್ರಾಂ ಪ್ರೀತಿ: ಪ್ರೇಯಸಿ, ಆಕೆಯ ಪೋಷಕರಿಗೂ ಬೆಂಕಿ ಹಚ್ಚಿದ ಪಾಪಿ!
ಕರ್ನಾಟಕಪ್ರಮುಖ

ಇನ್‌ಸ್ಟಾಗ್ರಾಂ ಪ್ರೀತಿ: ಪ್ರೇಯಸಿ, ಆಕೆಯ ಪೋಷಕರಿಗೂ ಬೆಂಕಿ ಹಚ್ಚಿದ ಪಾಪಿ!

Share
2 Min Read
SHARE

newsics.com

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಪ್ರೇಯಸಿ ಮತ್ತು ಆಕೆಯ ಪೋಷಕರ ಮೇಲೆ ಚಂದು ಎಂಬ ಆರೋಪಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬೈಕ್ ವಿಚಾರವಾಗಿ ನಡೆದ ಗಲಾಟೆಯೇ ಈ ಕೃತ್ಯಕ್ಕೆ ಕಾರಣವಾಗಿದ್ದು, ಗಾಯಾಳುಗಳು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರೇಯಸಿ ಸೇರಿದಂತೆ ಮೂವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 6ರಂದು ಬೆಂಗಳೂರಿನ ತರಬನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೂವರು ಗಾಯಾಳುಗಳು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರೇಯಸಿ ತಾಯಿ ಮಂಜಮ್ಮ ಆರೋಗ್ಯಸ್ಥಿತಿ ಗಂಭೀರವಾಗಿದೆ.

ಚಂದು ಅಲಿಯಾಸ್ ಪಾಂಡು ಬಂಧಿತ ಆರೋಪಿ. ಪ್ರೇಯಸಿ ಸುಮಲತಾ, ಪ್ರೇಯಸಿ ತಾಯಿ-ತಂದೆಗೆ ಬೆಂಕಿ ಹಚ್ಚಿದ್ದಾನೆ. ಮದುವೆಯಾಗಿ ಮಕ್ಕಳಿದ್ರೂ ಇನ್‌ಸ್ಟಾಗ್ರಾಂ ಮೂಲಕ ಸುಮಲತಾಳ ಪರಿಚಯ ಮಾಡಿಕೊಂಡಿದ್ದನು. ಕಳೆದ ಆರು ವರ್ಷಗಳಿಂದ ಇಬ್ಬರು ಪ್ರೀತಿ-ಪ್ರೇಮ ಅಂತ ಸುತ್ತಾಡಿದ್ದಾರೆ. ಆದ್ರೆ ಸುಮಲತಾಗೆ ಬೇರೊಬ್ಬನ ಜೊತೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಮದುವೆ ಬಳಿಕ ಚಂದುನಿಂದ ಸುಮಲತಾ ದೂರವಾಗಿದ್ದಳು.
ಗಂಡನಿಗೆ ವಿಷಯ ಗೊತ್ತಾಗ್ತಿದ್ದಂತೆ ಸುಮಲತಾ ಚಂದು ಜೊತೆ ಹೋಗಿದ್ದಳು. ಆರಂಭದಲ್ಲಿ ಸುಮಲತಾಳನ್ನು ಚೆನ್ನಾಗಿಯೇ ನೋಡಿಕೊಂಡಿದ್ದ ಚಂದು ನಂತರ ಕಿರುಕುಳ ನೀಡಲು ಆರಂಭಿಸಿದ್ದನು. ನಂತರ ಮತ್ತೊಬ್ಬ ಮಹಿಳೆಯನ್ನು ಕರೆದುಕೊಂಡು ಬಂದು ಮನೆಯಲ್ಲಿಟ್ಟುಕೊಂಡಿದ್ದಾನೆ. ಇದನ್ನು ಸುಮಲತಾ ಪ್ರಶ್ನೆ ಮಾಡಿದ್ದಾಳೆ. ಚಂದು ಜೊತೆ ಬಂದಿರುವ ಮಹಿಳೆಗೆ 10 ವರ್ಷದ ಮಗನಿದ್ದಾನೆ ಎಂದು ಸುಮಲತಾ ಹೇಳಿದ್ದಾಳೆ. ಇದರಿಂದ ಚಂದುವಿನಿಂದ ಸುಮಲತಾ ದೂರವಾಗಿದ್ದಳು.
ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಬೈಕ್ ವಿಚಾರವಾಗಿ ಸುಮಲತಾ ಮತ್ತು ಚಂದು ಜೊತೆ ಗಲಾಟೆಯಾಗಿದೆ. ಬೈಕ್ ಕೊಡಲ್ಲ ಎಂದು ಸುಮಲತಾ ಮತ್ತು ತಾಯಿ ಮಂಜಮ್ಮ, ತಂದೆ ಶ್ರೀರಾಮುಲು ಹೇಳಿದ್ದಾರೆ. ಇದರಿಂದ ಕೋಪಗೊಂಡ ಚಂದು ಮೂವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾನೆ.

ಬೆಂಕಿ ದಾಳಿಗೆ ಒಳಗಾದ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿ, ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಶ್ರೀರಾಮುಲು ಮತ್ತು ಸುಮಲತಾ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಜಮ್ಮ ಗಂಭೀರವಾಗಿದ್ದಾರೆ. ಈ ಹಿಂದೆ ಸೋಲದೇವನಹಳ್ಳಿ ಅಲ್ಲಿ ದೂರು ದಾಖಲಾಗಿತ್ತು.

ಇರಾನ್-ಇಸ್ರೇಲ್ ಮಧ್ಯ ಯುದ್ಧ ಹಿನ್ನೆಲೆ; ಕೆಂಪೇಗೌಡ ಏರ್ಪೋರ್ಟ್ ನಲ್ಲಿ 24 ವಿಮಾನಗಳ ಹಾರಾಟ ರದ್ದು!

TAGGED:Instagram lovethen perversion: The sinner who set fire to his lover and her parents!
Share This Article
Facebook Twitter Copy Link Print
Previous Article ಇರಾನ್-ಇಸ್ರೇಲ್ ಮಧ್ಯ ಯುದ್ಧ ಹಿನ್ನೆಲೆ; ಕೆಂಪೇಗೌಡ ಏರ್ಪೋರ್ಟ್ ನಲ್ಲಿ 24 ವಿಮಾನಗಳ ಹಾರಾಟ ರದ್ದು!
Next Article 15ನೇ ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿಗೆ ಅಲ್ಲು ಅರ್ಜುನ್ ದುಬಾರಿ ಗಿಫ್ಟ್ ; ವೈರಲ್ ವಿಡಿಯೋ ನೋಡಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?