Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಿಳಿಶಾಸ್ತ್ರ ಹೇಳುವ ನೆಪದಲ್ಲಿ ಐಟಿ ಅಧಿಕಾರಿಗೆ ಲಕ್ಷಾಂತರ ರೂ. ಪಂಗನಾಮ!
ಕರ್ನಾಟಕಪ್ರಮುಖ

ಗಿಳಿಶಾಸ್ತ್ರ ಹೇಳುವ ನೆಪದಲ್ಲಿ ಐಟಿ ಅಧಿಕಾರಿಗೆ ಲಕ್ಷಾಂತರ ರೂ. ಪಂಗನಾಮ!

Share
2 Min Read
SHARE

newsics.com

ಬೆಂಗಳೂರಿನಲ್ಲಿ ಐಟಿ ಅಧಿಕಾರಿಯೊಬ್ಬರಿಗೆ ಗಿಳಿಶಾಸ್ತ್ರದ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ ನಡೆದಿದೆ. ವರ್ಗಾವಣೆ ಮತ್ತು ಅಭಿವೃದ್ಧಿ ಆಮಿಷ ಒಡ್ಡಿ 35 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ಶೇಖರ್ ಎಂಬಾತ ಪರಾರಿಯಾಗಿದ್ದಾನೆ.

ಕೆಲವು ವರ್ಷಗಳಿಂದ ಬೆಂಗಳೂರಿನ ಐಟಿ ಇಲಾಖೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯೊಬ್ಬರು ಕಳೆದ ಡಿಸೆಂಬರ್ ತಿಂಗಳಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಗಿಳಿಶಾಸ್ತ್ರ ಹೇಳುತ್ತಿದ್ದ ಶೇಖರ್ ಎಂಬಾತನ ಪರಿಚಯವಾಗಿತ್ತು. ಭಾರತಿನಗರದ ಶ್ರೀ ಸರ್ಕಲ್ ಬಳಿ ಗಿಳಿಶಾಸ್ತ್ರ ಹೇಳುತ್ತಿದ್ದ ಶೇಖರ್ ಎಂಬಾತ, ಮುಖ ನೋಡಿ ಜಾತಕ ಹಾಗೂ ಭವಿಷ್ಯ ಹೇಳುತ್ತೇನೆ ಎಂದು ಅಧಿಕಾರಿಯನ್ನು ನಂಬಿಸಿದ್ದ.

 

ಜೀವನದಲ್ಲಿ ಅಭಿವೃದ್ಧಿ ಆಗಬೇಕಾದರೆ ವಿಶೇಷ ಪೂಜೆ ಮಾಡಿಸಬೇಕು ಎಂದು ಹೇಳಿದ ಗಿಳಿಶಾಸ್ತ್ರದ ಶೇಖರ್, ಅದಕ್ಕಾಗಿ ಆರಂಭದಲ್ಲಿ ಸುಮಾರು 50 ಸಾವಿರ ರೂಪಾಯಿ ಪಡೆದು ಪೂಜೆ ಮಾಡಿಸಿದ್ದ. ನಂತರವೂ ಆ ಅಧಿಕಾರಿಗೆ ಪದೇ ಪದೇ ಕರೆ ಮಾಡಿ ವಿವಿಧ ಪೂಜೆಗಳ ಬಗ್ಗೆ ಹೇಳುತ್ತಿದ್ದ.

 

ಇದೇ ವೇಳೆ ವರ್ಗಾವಣೆಯ ವಿಚಾರವಾಗಿ ಗಿಳಿಶಾಸ್ತ್ರ ಕೇಳಿದಾಗ, ದೊಡ್ಡ ಪೂಜೆ ಮಾಡಬೇಕು. ಅದಕ್ಕಾಗಿ ಮನೆಯಲ್ಲಿರುವ ಚಿನ್ನಾಭರಣಗಳನ್ನು ತರಬೇಕು ಎಂದು ಶೇಖರ್ ಸಲಹೆ ನೀಡಿದ್ದ. ಅವನ ಮಾತನ್ನು ನಂಬಿದ ಐಟಿ ಅಧಿಕಾರಿ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ 194 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ 300 ಗ್ರಾಂ ಬೆಳ್ಳಿಯನ್ನು ತೆಗೆದುಕೊಂಡು ಹೋಗಿ ಆತನಿಗೆ ನೀಡಿದ್ದರು.

 

ಒಂದು ದಿನದಲ್ಲೇ ವಾಪಸ್ ಕೊಡುತ್ತೇನೆ ಎಂದು ಹೇಳಿದ್ದ ಶೇಖರ್, ನಂತರ ಪೂಜೆ ಇನ್ನೂ ಮುಗಿದಿಲ್ಲ ಎಂದು ಹೇಳಿ ಸುಮಾರು ಒಂದು ವಾರ ಕಾಲ ಅಧಿಕಾರಿಯನ್ನು ಸತಾಯಿಸಿದ್ದ. ಬಳಿಕ ಐಟಿ ಅಧಿಕಾರಿ ಭಾರತಿನಗರದ ಶ್ರೀ ಸರ್ಕಲ್ ಬಳಿ ಹೋಗಿ ನೋಡಿದಾಗ ಅಲ್ಲಿ ಗಿಳಿಶಾಸ್ತ್ರ ಹೇಳುತ್ತಿದ್ದ ಶೇಖರ್ ಇರಲಿಲ್ಲ. ಗಿಳಿಶಾಸ್ತ್ರ ಹೇಳುವ ವ್ಯಕ್ತಿ ಇಲ್ಲದಿರುವುದು ಕಂಡು ಗಬಾರಿಯಾಗಿದ್ದಾರೆ. ಕರೆ ಮಾಡಿದರೆ ಯಾವುದೇ ಸಂಪರ್ಕಕ್ಕೂ ಆತ ಸಿಕ್ಕಿಲ್ಲ. ತಾನು ವಂಚನೆಗೊಳಗಾದ ವಿಚಾರ ಅರಿವಾಗುತ್ತಿದ್ದಂತೆ ಐಟಿ ಅಧಿಕಾರಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಗಿಳಿಶಾಸ್ತ್ರ ಹೇಳುವ ಶೇಖರ್‌ಗಾಗಿ ಹುಡುಕಾಟ ನಡೆಸಿದ್ದಾರೆ.

https://www.newsics.com/2026/03/10/us-israel-war-17-flights-cancelled-at-kempegowda-airport/

TAGGED:IT officer charged with lakhs of rupees on the pretext of teaching parrot science!
Share This Article
Facebook Twitter Copy Link Print
Previous Article ಅಮೇರಿಕ-ಇಸ್ರೇಲ್ ಯುದ್ಧ : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 17 ವಿಮಾನಗಳ ಹಾರಾಟ ರದ್ದು
Next Article ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ ; ಇಂದು ಚಿನ್ನ, ಬೆಳ್ಳಿ ದರ ಹೀಗಿದೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?