Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆರೆಗೆ ಬಿದ್ದ ಮಗ-ರಕ್ಷಿಸಲು ತೆರಳಿದ ತಂದೆ ಜಲಸಮಾಧಿ
ಕರ್ನಾಟಕಪ್ರಮುಖ

ಕೆರೆಗೆ ಬಿದ್ದ ಮಗ-ರಕ್ಷಿಸಲು ತೆರಳಿದ ತಂದೆ ಜಲಸಮಾಧಿ

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಮಡಿಕೇರಿ: ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಗ ಹಾಗೂ ಆತನನ್ನು ರಕ್ಷಿಸಲು ಕೆರೆಗೆ ಇಳಿದ ತಂದೆ ಇಬ್ಬರೂ ನೀರಿನಲ್ಲಿ ಮುಳುಗಿ ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಪೊನ್ನಂಪೇಟೆ ತಾಲೂಕಿನ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ.
ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎರಡನೇ ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಜೆ. ಕೆ. ಕೆಂಚ (8) ಹಾಗೂ ಆತನ ತಂದೆ ಜೇನುಕುರುಬರ ಶಿವಣ್ಣ(40) ಮೃತಪಟ್ಟವರು. ಚಿಕ್ಕಮುಂಡೂರು ಗ್ರಾಮದ ಜಾಲಿ ಪೂವಯ್ಯ ಎಂಬವರ ಲೈನ್ ಮನೆಯಲ್ಲಿ ಜೆ.ಕೆ.ಶಿವಣ್ಣ ತನ್ನ ಕುಟುಂಬದೊಂದಿಗೆ ನೆಲೆಸಿದ್ದು, ಭಾನುವಾರ ಶಾಲೆಗೆ ರಜೆ ಇದ್ದ ಹಿನ್ನಲೆಯಲ್ಲಿ ತನ್ನ ಕುಟುಂಬದವರೊಂದಿಗೆ ಕೆರೆಗೆ ತೆರಳಿದ್ದರು. ಕೆರೆಯ ಬಳಿ ಸ್ನಾನ ಮಾಡಿಕೊಂಡು ಆಟವಾಡಿಕೊಂಡಿದ್ದ, ಬಾಲಕ ಕೆಂಚ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದು, ಇದನ್ನು ಗಮನಿಸಿದ ತಂದೆ ಶಿವಣ್ಣ ಮಗನನ್ನು ರಕ್ಷಿಸುವ ಸಲುವಾಗಿ ನೀರಿಗೆ ಇಳಿದಿದ್ದಾರೆ.
ಆದರೆ ಕೆರೆಯಲ್ಲಿ ಹೂಳು ಇದ್ದ ಕಾರಣ ದುರದೃಷ್ಟವಶಾತ್ ನೀರಿನಿಂದ ಹೊರಬರಲಾಗದೆ, ತಂದೆ ಮಗ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ.
ಭಾನುವಾರ ಸಂಜೆ ಶಿವಣ್ಣನ ಶವವನ್ನು ಕೆರೆಯಿಂದ ಹೊರಗೆ ತೆಗೆಯಲಾಗಿದ್ದು, ಸೋಮವಾರ ಬಾಲಕನ ಮೃತದೇಹವನ್ನು ಹೊರತೆಗೆಯಲಾಗಿದೆ.
ಕಣ್ಣೆದುರೇ ಗಂಡ ಹಾಗೂ ಮಗನನ್ನು ಕಳೆದುಕೊಂಡ ಶಿವಣ್ಣ ಅವರ ಪತ್ನಿ ಸುಮತಿ ತನ್ನ ಇನ್ನಿಬ್ಬರು ಪುಟ್ಟ ಮಕ್ಕಳೊಂದಿಗೆ ರೋಧಿಸುತಿದ್ದ ದೃಶ್ಯ, ಹಾಗೂ ಮಗ ಮೊಮ್ಮಗನನ್ನು ಕಳೆದುಕೊಂಡ ಶಿವಣ್ಣ ಅವರ ತಾಯಿಯ ಆಕ್ರಂದನ ಮುಗಿಲುಮುಟ್ಟಿತ್ತು.
ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಕುಟ್ಟ ವೃತ್ತ ನಿರೀಕ್ಷಕ ಶಿವರುದ್ರಪ್ಪ ಹಾಗೂ ಶ್ರೀಮಂಗಲ ಠಾಣಾಧಿಕಾರಿ ರವೀಂದ್ರ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತ ದೇಹಗಳನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.

ಮತ್ತಿಗೋಡು ಸಾಕಾನೆ ಶಿಬಿರದ ಅಭಿ ಸಾವು

TAGGED:drownsfather goes to rescue himSon falls into lake
Share This Article
Facebook Twitter Copy Link Print
Previous Article ಮತ್ತಿಗೋಡು ಸಾಕಾನೆ ಶಿಬಿರದ ಅಭಿ ಸಾವು
Next Article ನಮ್ಮಪ್ಪನ 7ನೇ ಮದುವೆ ನಿಲ್ಲಿಸಿ; ಪೊಲೀಸ್ ಠಾಣೆ ಮೆಟ್ಟಿಲೇರಿದ 3ನೇ ಹೆಂಡ್ತಿ ಮಗ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?