Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಒಡವೆ ಬ್ಯಾಗ್ ಕಳ್ಳತನ!
ಕರ್ನಾಟಕಪ್ರಮುಖ

ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಒಡವೆ ಬ್ಯಾಗ್ ಕಳ್ಳತನ!

Share
1 Min Read
SHARE

newsics.com

ಮಂತ್ರಾಲಯದಿಂದ ಮಂಗಳೂರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ 90 ಲಕ್ಷ ಒಡವೆ ಇರೋ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿರುವ ಘಟನೆ ಸಿಸಿ ಕ್ಯಾಮರಾದಲ್ಲಿ ಸಂಪೂರ್ಣವಾಗಿ ದಾಖಲಾಗಿದ್ದು, ನಾಲ್ಕು ಜನರಿಂದ ಈ ದರೋಡೆ ನಡೆದಿದೆ.
ಇದೀಗ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಈ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಸಿಂಧನೂರಿನಿಂದ ಸ್ಲೀಪರ್ ಕೋಚ್ ಬಸ್‌ನಲ್ಲಿ ಪ್ರಯಾಣಿಸಿ ಕೊಪ್ಪಳಕ್ಕೆ ಬಂದಿದ್ದಾನೆ. ಅದೇ ವೇಳೆ ಇನ್ನೂ ಮೂವರು ಖದೀಮರು ಬೇರೆ ವಾಹನದಲ್ಲಿ ಬಸ್‌ನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಒಟ್ಟು ನಾಲ್ವರು ಸೇರಿಕೊಂಡು ಈ ದರೋಡೆ ಕೃತ್ಯವನ್ನು ಸಂಚು ರೂಪಿಸಿ ನಡೆಸಿದ್ದಾರೆ.

ಈ ದರೋಡೆ Tawa Punjab Hotel ಮುಂಭಾಗದಲ್ಲಿ ನಡೆದಿದೆ. ರಾ.ಹೆ 63 ಕ್ಕೆ ಹೊಂದಿಕೊಂಡಂತೆ ಇರುವ ತವ ಪಂಜಾಬ್ ಹೊಟೇಲ್. ಮಂತ್ರಾಲಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕೊಪ್ಪಳ ಹೊರವಲಯದಲ್ಲಿ ಊಟಕ್ಕಾಗಿ ನಿಲ್ಲಿಸಲಾಗಿತ್ತು. ಆ ವೇಳೆ ಬಸ್‌ನಲ್ಲೇ ಮಲಗಿದ್ದ ಮಹಮ್ಮದ್ ಮತ್ತು ಇರ್ಷಾದ್ ಎಂಬ ಪ್ರಯಾಣಿಕರ ಬಳಿಯಿದ್ದ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.

ಹೋಟೆಲ್ ಮುಂಭಾಗದಲ್ಲಿದ್ದ ಸಿಸಿ ಕ್ಯಾಮರದಲ್ಲಿ ಈ ದರೋಡೆ ಕೃತ್ಯದ ಸಂಪೂರ್ಣ ದೃಶ್ಯ ದಾಖಲಾಗಿದ್ದು, ಆರೋಪಿಗಳು ಹೇಗೆ ಬಸ್‌ಗೆ ಹತ್ತಿ ಬಂಗಾರದ ಚೀಲವನ್ನು ಕದ್ದುಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಅವರದ್ದೇ ಆಗ ಸಿಗ್ನಲ್‌ಗಳು ಒಬ್ಬೊಬ್ಬರಂತೆ ಬಂದು ಕಾಯುತ್ತಿರುವುದು ಕಂಡುಬಂದಿದೆ. ಈ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಹಮ್ಮದ್ ಮತ್ತು ಇರ್ಷಾದ್ ಎಂಬವರು ಮಂತ್ರಾಲಯದಿಂದ ಮಂಗಳೂರಿಗೆ ಬಂಗಾರದೊಂದಿಗೆ ಪ್ರಯಾಣಿಸುತ್ತಿದ್ದರು. ಬಸ್ ಊಟಕ್ಕಾಗಿ ನಿಂತಿದ್ದ ವೇಳೆ ಅವರು ಮಲಗಿದ್ದ ಕಾರಣ ಖದೀಮರು ಈ ಅವಕಾಶವನ್ನು ಬಳಸಿಕೊಂಡು ದರೋಡೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿ ಕ್ಯಾಮರಾ ದೃಶ್ಯಾವಳಿ ಹಾಗೂ ಬಸ್ ಪ್ರಯಾಣಿಕರ ಮಾಹಿತಿಯ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ದರೋಡೆ ನಡೆಸಿದ ನಾಲ್ವರು ಖದೀಮರು ಯಾವ ದಿಕ್ಕಿಗೆ ಪರಾರಿಯಾಗಿದ್ದಾರೆ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.

BCCI Awards: ಕನ್ನಡಿಗ ರಾಹುಲ್ ದ್ರಾವಿಡ್ಗೆ ಜೀವಮಾನ ಸಾಧನೆ ಪ್ರಶಸ್ತಿ

TAGGED:Jewelry bag worth Rs. 90 lakhs stolen from a bus going from Mantralaya to Mangalore!
Share This Article
Facebook Twitter Copy Link Print
Previous Article BCCI Awards: ಕನ್ನಡಿಗ ರಾಹುಲ್ ದ್ರಾವಿಡ್ಗೆ ಜೀವಮಾನ ಸಾಧನೆ ಪ್ರಶಸ್ತಿ
Next Article ರಶ್ಮಿಕಾ ಮಂದಣ್ಣಗೋಸ್ಕರ 25 ಕೋಟಿ ಮನೆ ಕಟ್ಟುತ್ತಿದ್ದ ರಕ್ಷಿತ್‌ ಶೆಟ್ಟಿ!; ಈಗ ಆ ಮನೆ ಭೂತಬಂಗಲೆ ಆಗಿದ್ಯಾ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?