https://youtube.com/shorts/DiU6l59Harw?si=Atk3K2_RIgW0n5N2
newsics.com
ಶಿರಸಿ: ಮೊಬೈಲ್ ನೋಡಬೇಡ, ಪರೀಕ್ಷೆಯ ಸಮಯದಲ್ಲಿ ಓದಿನತ್ತ ಗಮನ ಹರಿಸುವಂತೆ ಪೋಷಕರು ಹೇಳಿದ್ದಕ್ಕೆ ಮನನೊಂದು 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗಣೇಶನಗರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ನಗರದ ಪ್ರತಿಷ್ಠಿತ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿ ಶುಭಂ ನಾಗೇಶ ನಾಯ್ಕ (15) ಎಂದು ಗುರುತಿಸಲಾಗಿದೆ. ಮುಂಬರುವ ಪರೀಕ್ಷೆಗಳ ಹಿನ್ನೆಲೆಯಲ್ಲಿ ಮೊಬೈಲ್ ನೋಡಬೇಡ, ಟಿವಿ ನೋಡುವುದನ್ನು ಕಡಿಮೆ ಮಾಡಿ, ಓದಿನ ಮೇಲೆ ಗಮನ ಕೇಂದ್ರೀಕರಿಸು ಎಂದು ಪೋಷಕರು ಬುದ್ಧಿಮಾತು ಹೇಳಿದ್ದರು. ಪೋಷಕರ ಈ ಮಾತಿನಿಂದ ತೀವ್ರವಾಗಿ ಬೇಸರಗೊಂಡ ಬಾಲಕ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಬಾಲಕನನ್ನು ಶಿರಸಿಯ ಟಿಎಸ್ ಎಸ್ (TSS) ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ವೈದ್ಯರು ಸತತ ಪ್ರಯತ್ನ ನಡೆಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಶುಭಂ ಮೃತಪಟ್ಟಿದ್ದಾನೆ.
https://www.newsics.com/2026/03/13/effect-of-war-increase-in-the-price-of-bottled-water/