https://youtube.com/shorts/JFDfzeRUAUw?si=UPiQjhCFAIkLXEhb
newsics.com
ಚೆನ್ನೈ: ತಮಿಳು ನಟ ದಳಪತಿ ವಿಜಯ್ ಜೊತೆ ಮದುವೆ ಸಮಾರಂಭಕ್ಕೆ ಭೇಟಿ ನೀಡಿದ ನಂತರ ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ತ್ರಿಷಾ ಕೃಷ್ಣನ್, ವಿಜಯ್ ಅವರ ವಿಚ್ಛೇದನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸದ ಘಟನೆ ಜರುಗಿದೆ.
ವಿಡಿಯೋನಲ್ಲಿ ತ್ರಿಷಾ ಚೆನ್ನೈ ವಿಮಾನ ನಿಲ್ದಾಣಕ್ಕೆ ಹ್ಯಾಂಡ್‌ಬ್ಯಾಗ್ ಹಿಡಿದುಕೊಂಡು ಬರುತ್ತಿರುವುದನ್ನು ನೋಡಬಹುದಾಗಿದ್ದು, ಕಪ್ಪು ಪ್ಯಾಂಟ್ ಮತ್ತು ಡೆನಿಮ್ ಜಾಕೆಟ್‌ನೊಂದಿಗೆ ಬಿಳಿ ಟಿ-ಶರ್ಟ್ ಧರಿಸಿ ಕ್ಯಾಶುಯಲ್ ಲುಕ್‌ನಲ್ಲಿ ಕಾಣಿಸಿಕೊಂಡರು. ಇನ್ನು ಏರ್ಪೋರ್ಟ್ ನಲ್ಲಿ ತ್ರಿಷಾ ನಡೆದುಕೊಂಡ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಹಲವಾರು ಪ್ಲಾಟ್‌ಫಾರ್ಮ್‌ಗಳಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗುತ್ತಿದ್ದು ಅಭಿಮಾನಿಗಳು ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ಮಾಡುತ್ತಿದ್ದಾರೆ.
ವಿಜಯ್ ಅವರ ಪತ್ನಿ ಸಂಗೀತಾ, ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿತ್ತು. ತಮ್ಮ ಪತಿಗೆ ವಿವಾಹೇತರ ಸಂಬಂಧವಿದೆ ಎಂದು ಆರೋಪಿಸಿ, ಅಗತ್ಯಬಿದ್ದರೆ ಆ ನಟಿಯ ಹೆಸರನ್ನು ಬಹಿರಂಗಪಡಿಸುವುದಾಗಿಯೂ ಅವರು ಹೇಳಿದ್ದರು.