newsics.com
ಇರಾನ್ನ (Iran) ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ವಿಮಾನವನ್ನು ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ರಾತ್ರೋರಾತ್ರಿ ಇಸ್ರೇಲ್ ಹೊಡೆದು ನಾಶಪಡಿಸಿರುವುದಾಗಿ ಘೋಷಿಸಿದೆ. ಈ ದಾಳಿಯು ಇರಾನ್‌ನ ಪ್ರಾದೇಶಿಕ ಸಮನ್ವಯಗಳಿಗೆ ದೊಡ್ಡ ಹೊಡೆತ ನೀಡಿದೆ ಎಂದು ಹೇಳಿದೆ.
ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣದ ಮೂಲಕ ಮಿತ್ರರಾಷ್ಟ್ರಗಳ ಜೊತೆ ಸಂಪರ್ಕ ಸಾಧಿಸಲು, ಮಿಲಿಟರಿ ಸಂಗ್ರಹಣೆಯನ್ನು ಸುಗಮಗೊಳಿಸಲು ಮತ್ತು ಸಂಬಂಧಗಳನ್ನು ನಿರ್ವಹಿಸಲು ಖಮೇನಿ ಮತ್ತು ಇರಾನಿನ ಇತರ ಹಿರಿಯ ಅಧಿಕಾರಿಗಳು ಈ ವಿಮಾನವನ್ನು ಬಳಸುತ್ತಿದ್ದರು ಎಂದು ಇಸ್ರೇಲ್ ರಕ್ಷಣಾ ಪಡೆಗಳು ತಿಳಿಸಿವೆ.
‘ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಇರಾನ್ ನಾಯಕನ ವಿಮಾನವನ್ನು ನಮ್ಮ ವಾಯುಪಡೆಯು ನಾಶಪಡಿಸಿತು. ಈ ವಿಮಾನವನ್ನು ಇರಾನ್ ಭಯೋತ್ಪಾದಕ ಆಡಳಿತದ ನಾಯಕ ಅಲಿ ಖಮೇನಿ, ಇತರೆ ಹಿರಿಯ ಅಧಿಕಾರಿಗಳು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಇತರೆ ದೇಶಗಳೊಂದಿಗೆ ಸಂಪರ್ಕ ಸಾಧಿಸಲು, ಮಿಲಿಟರಿ ಸಂಗ್ರಹಣೆಯನ್ನು ಹೆಚ್ಚಿಸಲು ಮತ್ತು ಸಂಬಂಧಗಳನ್ನು ನಿರ್ವಹಿಸಲು ಬಳಸುತ್ತಿದ್ದರು’ ಎಂದು ಇಸ್ರೇಲ್ನ IAF ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ದಿ ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಈ ತಿಂಗಳ ಆರಂಭದಲ್ಲಿ ಮೆಹ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಸ್ರೇಲ್ ದೇಶದ ವಾಯುಪಡೆ ಇರಾನ್ನ 16 ವಿಮಾನಗಳನ್ನು ಹೊಡೆದುರುಳಿಸಿತು. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಅಂಗವಾದ ಕುದ್ಸ್ ಫೋರ್ಸ್ ಈ ವಿಮಾನಗಳನ್ನು ಬಳಸುತ್ತಿತ್ತು ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ಮುಖ್ಯವಾಗಿ ಲೆಬನಾನ್‌ನ ಹೆಜ್ಬೊಲ್ಲಾಗೆ ಪ್ರಾಕ್ಸಿ ಗುಂಪುಗಳಿಗೆ ಶಸ್ತ್ರಾಸ್ತ್ರಗಳು ಮತ್ತು ಹಣವನ್ನು ಸಾಗಿಸಲು ಈ ವಿಮಾನ ಬಳಕೆಯಾಗುತ್ತಿತ್ತು ಎನ್ನಲಾಗಿದೆ.
ಎಲ್ಲೆಡೆ ಗ್ಯಾಸ್ ಸಿಲಿಂಡರ್‌ಗೆ ಪರದಾಟ, ಆದ್ರೆ ಸಚಿವರ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ!