Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೆರಗ ಸರ್ಸೆ ಹಾಡು ವಿವಾದ: ನೋಟಿಸ್‌ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್‌
ಪ್ರಮುಖಮನರಂಜನೆ

ಸೆರಗ ಸರ್ಸೆ ಹಾಡು ವಿವಾದ: ನೋಟಿಸ್‌ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್‌

Share
2 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ಸ್ಯಾಂಡಲ್‌ವುಡ್‌ ನಿರ್ದೇಶಕ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ಹಾಡಿನ ವಿವಾದ ಈಗ ಕೇವಲ ಸೋಷಿಯಲ್ ಮೀಡಿಯಾಗೆ ಸೀಮಿತವಾಗಿಲ್ಲ, ಬದಲಾಗಿ ರಾಷ್ಟ್ರೀಯ ಮಟ್ಟದಲ್ಲಿ ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ. ಧ್ರುವ ಸರ್ಜಾ ನಟನೆಯ ಮತ್ತು ಜೋಗಿ ಪ್ರೇಮ್ ನಿರ್ದೇಶನದ ಈ ಸಿನಿಮಾದ “ಸರ್ಸೆ ನಿನ್ನ ಸೆರಗ ಸರ್ಸೆ” (ಹಿಂದಿಯಲ್ಲಿ ‘ಸರ್ಕೆ ಚುನರ್ ತೇರಿ ಸರ್ಕೆ’) ಹಾಡು ಈಗ ದೊಡ್ಡ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಹಾಡಿನಲ್ಲಿ ಬಳಸಲಾದ ಅಶ್ಲೀಲ ಮತ್ತು ಡಬಲ್‌ ಮೀನಿಂಗ್‌ ಸಾಹಿತ್ಯದ ವಿರುದ್ಧ ಕೇಳಿಬಂದ ಸಾರ್ವಜನಿಕ ಆಕ್ರೋಶದ ಬೆನ್ನಲ್ಲೇ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಅಶ್ಲೀಲ ಹಾಡಿಗೆ ಬಾಲಿವುಡ್‌ನ ನೋರಾ ಫತೇಹಿ ಹಾಗೂ ಸಂಜಯ್ ದತ್ ಹೆಜ್ಜೆ ಹಾಕಿದ್ದರು. ಕನ್ನಡ ಹಾಗೂ ಬಾಲಿವುಡ್‌ನಲ್ಲಿ ಈ ಹಾಡು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಬಾಲಿವುಡ್‌ನ ಗಾಯಕರು, ಸಿನಿಮಾ ದಿಗ್ಗಜರು ಆಕ್ರೋಶ ಹೊರಹಾಕಿದ್ದರು. ಕನ್ನಡದಲ್ಲಿ ಸರ್ಸೆ ಸೆರಗ ಸಾಂಗ್ ಬಾಲಿವುಡ್‌ನಲ್ಲಿ ಸರ್ಕೆ ಚುನರ್ ಸಾಂಗ್ ಆಗಿ ಬಿಡುಗಡೆಯಾಗಿದೆ. ಇದೀಗ ಹಿಂದಿ ಹಾಡು ಯೂಟ್ಯೂಬ್‌ನಿಂದ ಡಿಲೀಟ್ ಮಾಡಲಾಗಿದೆ.

ಈ ಹಾಡಿನಲ್ಲಿ ಮಹಿಳೆಯರನ್ನು ಅವಮಾನಿಸುವಂತಹ ಮತ್ತು ಅಶ್ಲೀಲತೆಯನ್ನು ಪ್ರಚೋದಿಸುವಂತಹ ಸಾಹಿತ್ಯ ಹಾಗೂ ದೃಶ್ಯಗಳಿವೆ ಎಂಬ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವಿನೀತ್ ಜಿಂದಾಲ್ ಅವರು ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಹಾಡಿನಲ್ಲಿರುವ ಲೈಂಗಿಕ ಪ್ರಚೋದಕ ಸಾಹಿತ್ಯವು ಸಾರ್ವಜನಿಕ ವೀಕ್ಷಣೆಗೆ ಯೋಗ್ಯವಲ್ಲ ಮತ್ತು ಇದು ಯುವ ಪೀಳಿಗೆಯ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತದೆ ಎಂದು ದೂರಿದ್ದಾರೆ.
ಮಾನವ ಹಕ್ಕುಗಳ ಆಯೋಗದ ಕಠಿಣ ಸೂಚನೆ ಮತ್ತು ಜನರ ತೀವ್ರ ವಿರೋಧಕ್ಕೆ ಮಣಿದಿರುವ ಕೆಡಿ ಚಿತ್ರತಂಡ, ಇದೀಗ ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಜಾಲತಾಣಗಳಿಂದ ಹಾಡಿನ ಹಿಂದಿ ಆವೃತ್ತಿಯನ್ನು ಅಧಿಕೃತವಾಗಿ ತೆಗೆದುಹಾಕಿದೆ. ನೋರಾ ಫತೇಹಿ ಮತ್ತು ಸಂಜಯ್ ದತ್ ಕಾಣಿಸಿಕೊಂಡಿದ್ದ ಈ ಹಾಡಿನ ವಿರುದ್ಧ ಇಡೀ ಸ್ಯಾಂಡಲ್‌ವುಡ್ ಕೆಂಡಾಮಂಡಲವಾಗಿತ್ತು.
ರಕೀಬ್ ಆಲಂ ಬರೆದಿದ್ದ ಈ ಹಾಡಿನ ಸಾಹಿತ್ಯ ಮತ್ತು ಡಬಲ್‌ ಮೀನಿಂಗ್‌ ಸಂಭಾಷಣೆಗಳ ವಿರುದ್ಧ ನೆಟ್ಟಿಗರು ಪ್ರೇಮ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಸಿನಿಮಾ ಈಗ ಹಾಡಿನ ವಿವಾದದಿಂದಾಗಿ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸದ್ಯಕ್ಕೆ ಹಾಡನ್ನು ತೆಗೆದುಹಾಕಿರುವ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ವಿಲ್’ ಚಿತ್ರದ ವಿವಾದಿತ ಹಾಡು “ಸರ್ಸೆ ನಿನ್ನ ಸೆರಗ ಸರ್ಸೆ” (ಹಿಂದಿಯಲ್ಲಿ ‘ಸರ್ಕೆ ಚುನರ್ ತೇರಿ ಸರ್ಕೆ’) ಬಿಡುಗಡೆಯಾದ ಕೇವಲ ಒಂದು ದಿನದಲ್ಲೇ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಹಾಡಿನಲ್ಲಿದ್ದ ಅಶ್ಲೀಲ ದೃಶ್ಯಗಳು ಮತ್ತು ಸಾಹಿತ್ಯದ ವಿರುದ್ಧ ಸಾರ್ವಜನಿಕರು ಹಾಗೂ ಕಾನೂನು ಸಂಸ್ಥೆಗಳು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ಚಿತ್ರತಂಡ ಹಾಡಿನ ಹಿಂದಿ ಆವೃತ್ತಿಯನ್ನು ಯೂಟ್ಯೂಬ್ ಹಾಗೂ ಇತರ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಂದ ಅಧಿಕೃತವಾಗಿ ತೆಗೆದುಹಾಕಿದೆ.

ಪಬ್ಗಳಿಗೂ ತಟ್ಟಿದ ಸಿಲಿಂಡರ್ ಸಮಸ್ಯೆ: ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!

TAGGED:Seraga Sarse song controversy: Hindi song deleted after notice
Share This Article
Facebook Twitter Copy Link Print
Previous Article ಪಬ್ಗಳಿಗೂ ತಟ್ಟಿದ ಸಿಲಿಂಡರ್ ಸಮಸ್ಯೆ: ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
Next Article ಎಲ್ಪಿಜಿ ಗ್ರಾಹಕರು ಇಕೆವೈಸಿ ಅಪ್ಡೇಟ್ ಮಾಡುವುದು ಹೇಗೆ?

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?