https://youtube.com/shorts/DiU6l59Harw?si=ZuaOlVBTxzvWqxLP
newsics.com
ಬೆಂಗಳೂರು: ಯುಗಾದಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆ ರಾಜ್ಯದ ಹಲವೆಡೆ ಆಲಿಕಲ್ಲು ಮಳೆ ಆರಂಭವಾಗಿದ್ದು, ಮುಂದಿನ ಎರಡು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ಒಟ್ಟು 17 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರೇಬಿಯನ್ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಕಂಡುಬಂದಿರುವ ಚಂಡಮಾರುತದ ಸುಳಿಗಾಳಿಯು ಪಶ್ಚಿಮ ಘಟ್ಟಗಳ ಮೇಲೆ ಪ್ರಭಾವ ಬೀರಿದೆ.ಈಗಾಗಲೇ ಹಾವೇರಿ, ಚಿತ್ರದುರ್ಗ ಮತ್ತು ಮೈಸೂರು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಯುಗಾದಿ ಹಬ್ಬದ ಹೊತ್ತಿಗೆ ರಾಜ್ಯದ ಬಹುತೇಕ ಭಾಗಗಳು ತಂಪಾಗಲಿವೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ 32ಸೆಲ್ಸಿಯಸ್ ಹಾಗೂ ಕನಿಷ್ಠ 19ಸೆಲ್ಸಿಯಸ್ ತಾಪಮಾನ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
https://www.newsics.com/2026/03/18/singer-dhananjay-sharma-lifts-dancer-and-throws-her-off-stage/