Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ‘ಸರ್ಕೆ ಚುನರ್ ತೇರಿ’ ಹಾಡು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ; ಲೋಕಸಭೆಯಲ್ಲಿ ಘೋಷಣೆ
ದೇಶಪ್ರಮುಖಮನರಂಜನೆ

‘ಸರ್ಕೆ ಚುನರ್ ತೇರಿ’ ಹಾಡು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ; ಲೋಕಸಭೆಯಲ್ಲಿ ಘೋಷಣೆ

Share
2 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ಸಂಜಯ್ ದತ್ ಮತ್ತು ನೋರಾ ಫತೇಹಿ ನಟಿಸಿದ ‘ಸರ್ಕೆ ಚುನರ್ ತೇರಿ’ ಹಾಡನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ನಿಷೇಧಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಧ್ರುವ ಸರ್ಜಾ ನಟನೆಯ, ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ (KD) ಸಿನಿಮಾದ ಈ ಹಾಡಿನಿಂದ ಇಡೀ ಕನ್ನಡ ಚಿತ್ರರಂಗಕ್ಕೆ ಮುಜುಗರ ಆದಂತಾಗಿದೆ.
ಸಮಾಜವಾದಿ ಪಕ್ಷದ ಸಂಸದ ಆನಂದ್ ಬಡೋರಿಯಾ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಅಶ್ವಿನಿ ವೈಷ್ಣವ್, ‘ಈ ಹಾಡನ್ನು ಈಗಾಗಲೇ ನಿಷೇಧಿಸಲಾಗಿದೆ. ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವು ಸಂಪೂರ್ಣ ಪ್ರಶ್ನಾತೀತವಲ್ಲ. ಸಂವಿಧಾನದ ರಚನೆಕಾರರು ವಿಧಿಸಿರುವ ಸಮಂಜಸವಾದ ನಿರ್ಬಂಧಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು’ ಎಂದು ತಿಳಿಸಿದರು. ಸಂವಿಧಾನದ ವಿಧಿ 19(2) ಉಲ್ಲೇಖಿಸಿದ ಸಚಿವರು, ಸಾರ್ವಜನಿಕ ಸುವ್ಯವಸ್ಥೆ, ಸಭ್ಯತೆ ಮತ್ತು ನೈತಿಕತೆಗೆ ಧಕ್ಕೆ ಬಂದಾಗ ಇಂತಹ ನಿರ್ಬಂಧಗಳನ್ನು ಹೇರಲು ಸರ್ಕಾರಕ್ಕೆ ಅಧಿಕಾರವಿದೆ ಎಂದು ಹೇಳಿದರು.
ಡಿಜಿಟಲ್ ಮಾಧ್ಯಮಗಳ ಮೂಲಕ ವಿಷಯಗಳು ವೇಗವಾಗಿ ಹರಡುತ್ತಿರುವ ಇಂದಿನ ದಿನಗಳಲ್ಲಿ ಸಮಾಜದ ಹಿತದೃಷ್ಟಿಯಿಂದ ಇಂತಹ ಕ್ರಮಗಳು ಅನಿವಾರ್ಯ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ‘ಸಮಾಜದ ರಕ್ಷಣೆಗಾಗಿ, ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ವಂಚಿತ ವರ್ಗಗಳ ಗೌರವ ಕಾಪಾಡಲು ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಸಿದ್ಧವಿದೆ’ ಎಂದು ವೈಷ್ಣವ್ ಅವರು ಲೋಕಸಭೆಯಲ್ಲಿ ತಿಳಿಸಿದರು.
ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಬಿಡುಗಡೆಯಾದ ತಕ್ಷಣವೇ ಅದರ ಸಾಹಿತ್ಯ ಮತ್ತು ದೃಶ್ಯಗಳು ಅಶ್ಲೀಲತೆಯಿಂದ ಕೂಡಿವೆ ಎಂಬ ಆರೋಪ ಕೇಳಿಬಂದಿತ್ತು. ಇದು ಮಹಿಳೆಯರನ್ನು ಕೀಳಾಗಿ ಚಿತ್ರಿಸುತ್ತದೆ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಕರ್ನಾಟಕ ಮತ್ತು ಹರಿಯಾಣ ಮಹಿಳಾ ಆಯೋಗಗಳು ಈ ಹಾಡಿನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದವು.
ನಟ ರವಿ ಕಿಶನ್, ನಟಿ ಕಂಗನಾ ರಣಾವತ್, ಗಾಯಕ ಅರ್ಮಾನ್ ಮಲಿಕ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಕೂಡ ಹಾಡಿನ ಸಾಹಿತ್ಯ ಆಕ್ಷೇಪಾರ್ಹವಾಗಿದೆ ಎಂದು ಸಾರ್ವಜನಿಕವಾಗಿ ಖಂಡಿಸಿದ್ದರು. ಈ ಹಾಡಿನ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ನೋರಾ ಫತೇಹಿ ಅವರು ಚಿತ್ರತಂಡವೇ ಇದಕ್ಕೆಲ್ಲ ಹೊಣೆ ಎಂದು ಹೇಳಿದ್ದಾರೆ. ಈ ಎಲ್ಲ ಬೆಳವಣಿಗೆಗಳು ‘ಕೆಡಿ’ ಸಿನಿಮಾಗೆ ಅಪಖ್ಯಾತಿ ತಂದಿವೆ.

https://x.com/ANI/status/2034169645067039093?ref_src=twsrc%5Etfw%7Ctwcamp%5Etweetembed%7Ctwterm%5E2034169645067039093%7Ctwgr%5E1fc71220378b4afa612cfa61fc424beb910f0d8b%7Ctwcon%5Es1_c10&ref_url=https%3A%2F%2Fapi-news.dailyhunt.in%2F

ನಯನತಾರಾ ಮದುವೆಯಾಗಲು ನನಗೆ ಇಷ್ಟವಿದೆ; ಅಬ್ಬಾ ಸಂಸದನ ಆಸೆ ಕೇಳಿ

TAGGED:Central government bans song 'Sarke Chunar Teri'; Announcement in Lok Sabha
Share This Article
Facebook Twitter Copy Link Print
Previous Article ನಯನತಾರಾ ಮದುವೆಯಾಗಲು ನನಗೆ ಇಷ್ಟವಿದೆ; ಅಬ್ಬಾ ಸಂಸದನ ಆಸೆ ಕೇಳಿ
Next Article ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?