Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೌಟುಂಬಿಕ ಕಲಹ : ಪತ್ನಿ ಸೇರಿದಂತೆ ಒಂದೇ ಕುಟುಂಬದ ಐವರ ಮೇಲೆ ಆಸಿಡ್ ದಾಳಿ ಮಾಡಿದ ಮಾಜಿ ಪತಿ
ಕರ್ನಾಟಕಪ್ರಮುಖ

ಕೌಟುಂಬಿಕ ಕಲಹ : ಪತ್ನಿ ಸೇರಿದಂತೆ ಒಂದೇ ಕುಟುಂಬದ ಐವರ ಮೇಲೆ ಆಸಿಡ್ ದಾಳಿ ಮಾಡಿದ ಮಾಜಿ ಪತಿ

Share
1 Min Read
SHARE

https://www.newsics.com/2026/03/19/happy-ugadi-may-the-year-of-ugadi-be-prosperous/

newsics.com

ಯುಗಾದಿ ಹಬ್ಬದ ದಿನದಂದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾಜಿ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ಒಂದೇ ಕುಟುಂಬದ ಐವರ ಮೇಲೆ ಆಸಿಡ್ ದಾಳಿ ನಡೆಸಿ, ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ಸುಹಿಲ್ ಭಾಷಾ ಮತ್ತು ತಾಸಿನಾ ಬಾನು ಎಂಬುವವರು ಈ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗಳಿಗೆ ಒಂದು ಹೆಣ್ಣು ಮಗು ಕೂಡ ಇದೆ. ಆದರೆ, ಕಳೆದ ಕೆಲವು ತಿಂಗಳುಗಳಿಂದ ಆಟೋ ಚಾಲಕನಾಗಿದ್ದ ಸುಹಿಲ್ ಭಾಷಾ ತನ್ನ ಪತ್ನಿಗೆ ವಿಪರೀತ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಪತಿಯ ಕಾಟ ತಾಳಲಾರದೆ ತಾಸಿನಾ ಬಾನು ಕೆಲವು ತಿಂಗಳ ಹಿಂದೆ ಆತನಿಂದ ದೂರವಾಗಿ ಬೆಂಗಳೂರಿಗೆ ತೆರಳಿ ಅಲ್ಲಿ ವಾಸವಾಗಿದ್ದರು.

ಈ ದಾಳಿಯಲ್ಲಿ ತಾಸಿನಾ ಬಾನು, ಅವರ ಪುತ್ರಿ ರೋಷನಿ, ಸಹೋದರಿ ನೇಹಾ, ನೇಹಾಳ ಪುತ್ರಿ ಇಕ್ರಾ ಹಾಗೂ ಹಿರಿಯ ಸಹೋದರಿ ನಗ್ಮಾ ನಾಯಕ ಸೇರಿ ಐವರಿಗೂ ತೀವ್ರ ಗಾಯಗಳಾಗಿವೆ. ಐವರ ಮೇಲೂ ಆಸಿಡ್ ಬಿದ್ದಿದ್ದು, ದೇಹದ ಹಲವು ಭಾಗಗಳು ಸುಟ್ಟುಹೋಗಿವೆ. ದಾಳಿಯ ನಂತರ ಆರೋಪಿ ಸುಹಿಲ್ ಭಾಷಾ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಗೊಂಡಿರುವ ಐವರನ್ನು ತಕ್ಷಣವೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಚ್ಚಿನೇಟು ಮತ್ತು ಆಸಿಡ್ ದಾಳಿಯಿಂದ ತತ್ತರಿಸಿರುವ ಕುಟುಂಬಸ್ಥರ ಪೈಕಿ ತಾಸಿನಾ ಬಾನು ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಕೋಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದ ನೆಹರು ನಗರದ ನಿವಾಸಿಯಾಗಿರುವ ಆರೋಪಿ ಸುಹಿಲ್ ಭಾಷಾ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದು, ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಪತ್ನಿ ತನ್ನ ಸಂಬಂಧ ಕಡಿದುಕೊಂಡಿದ್ದಾಳೆ ಎಂಬ ಕೋಪದಿಂದಲೇ ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

https://www.newsics.com/2026/03/20/prices-of-over-1000-essential-medicines-to-become-more-expensive-from-april-1/

TAGGED:Family feud: Ex-husband attacked five members of the same family including his wife with acid
Share This Article
Facebook Twitter Copy Link Print
Previous Article ಏ.1ರಿಂದ ದುಬಾರಿಯಾಗಲಿವೆ 1000ಕ್ಕೂ ಹೆಚ್ಚು ಅಗತ್ಯ ಔಷಧಗಳ ಬೆಲೆ
Next Article ಪರಾಭವ ಸಂವತ್ಸರ: ಈ ವರ್ಷದಲ್ಲಿ ಸೋಲೋದು ಏನೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?