https://youtube.com/shorts/1G3iDuCfqaQ?si=rbtHZp_4mD8cY9Sv
newsics.com
ಕಾಂತಾರ ಹಾಗೂ ಚಾಪ್ಟರ್ 1 ಸಿನಿಮಾ ಮೂಲಕ ರಿಷಬ್ ಶೆಟ್ಟಿ ಅವರು ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ನಿರ್ದೇಶನ ಮಾಡುವುದರ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಈ ಎರಡೂ ಸಿನಿಮಾಗಳನ್ನು ಕನ್ನಡದ ಹೆಮ್ಮೆ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿತ್ತು. ನಿರ್ದೇಶಕ ರಿಷಬ್ ಶೆಟ್ಟಿ ತಮ್ಮದೇ ಬ್ಯಾನರ್ ಅಲ್ಲಿ ‘ಚಾಪ್ಟರ್ 2’ ಎಂದು ಘೋಷಣೆ ಮಾಡಿದ್ದಾರೆ.
ಯುಗಾದಿ ಹಬ್ಬವನ್ನು ಪತ್ನಿಯೊಂದಿಗೆ ಆಚರಿಸಿದ ಪೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ ಈ ಪೋಸ್ಟ್ ಬಂದಿದೆ. ರಿಷಬ್ ಶೆಟ್ಟಿ ಯುಗಾದಿ ಹಬ್ಬದ ಶುಭಾಶಯವನ್ನು ಕೋರುತ್ತಾ “ಅಧ್ಯಾಯ ಎರಡು ಇಲ್ಲಿಂದ ಶುರು” ಎಂದು ಬರೆದು ಪೋಸ್ಟ್ ಮಾಡಿದ್ದರು. ರಿಷಬ್ ಶೆಟ್ಟಿ ಅವರು ಹೊಂಬಾಳೆ ಫಿಲ್ಮ್ಸ್ ಅನ್ನು ಇನ್ಸ್ಟಾದಲ್ಲಿ ಅನ್ಫಾಲೋ ಮಾಡಿ, ತಮ್ಮದೇ ಬ್ಯಾನರ್ ಅಡಿಯಲ್ಲಿ “ಚಾಪ್ಟರ್ 2” ಘೋಷಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ಆಗುತ್ತಿವೆ.
ರಿಷಬ್ ಪೋಸ್ಟರ್ ಅಲ್ಲಿ ಎಲ್ಲಿಯೂ ಇದು ‘ಕಾಂತಾರ: ಚಾಪ್ಟರ್ 2’ ಎಂದು ಅನೌನ್ಸ್ ಮಾಡಿಲ್ಲ. ಹೀಗಾಗಿ ವಿವಿಧ ಚರ್ಚೆ ನಡೆದಿದೆ. ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ’ ಚಿತ್ರಕ್ಕೆ ಎರಡನೇ ಚಾಪ್ಟರ್ ಇದಾಗಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಇನ್ನೂ ಕೆಲವರು ‘ಕಾಂತಾರ: ಚಾಪ್ಟರ್ 2’ ಎನ್ನುತ್ತಿದ್ದಾರೆ.
ಇವುಗಳ ಮಧ್ಯೆ ರಿಷಬ್ ಅವರು ಇನ್ಸ್ಟಾದಲ್ಲಿ ‘ಕಾಂತಾರ’ ಹಾಗೂ ‘ಹೊಂಬಾಳೆ ಫಿಲ್ಮ್ಸ್’ ಖಾತೆಯನ್ನು ಅನ್ಫಾಲೋ ಮಾಡಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ.
https://www.newsics.com/2026/03/21/huge-increase-in-petrol-prices-new-rates-implemented/