https://youtube.com/shorts/1G3iDuCfqaQ?si=rbtHZp_4mD8cY9Sv
newsics.com
ಬೇಸಿಗೆಯ ಬಿಸಿಲಿನ ಬೇಗೆಯ ನಡುವೆ ದೇಶದ ವಿವಿಧ ರಾಜ್ಯಗಳಲ್ಲಿ ಗುಡುಗು, ಸಿಡಿಲು, ಜೋರಾದ ಗಾಳಿ ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಐಎಂಡಿ ಮಾರ್ಚ್ 21 ರಿಂದ 24 ರ ತನಕ ಉಪ-ಹಿಮಾಲಯದ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ 21 ರಂದು ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ
ಮುಂದಿನ ಕೆಲವು ದಿನ ದೇಶದ ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದೇಶದ ಪೂರ್ವ, ಕೇಂದ್ರ ಮತ್ತು ಈಶಾನ್ಯ ಭಾಗಗಳಲ್ಲಿ ಹವಾಮಾನ ಚಟುವಟಿಕೆಗಳು ತೀವ್ರಗೊಂಡಿವೆ ಎಂದು ಐಎಂಡಿ ಹೇಳಿದ್ದು, ಭಾರೀ ಮಳೆ, ಬಿರುಗಾಳಿ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ಕೊಟ್ಟಿದೆ.
ಗುಡುಗು ಸಹಿತ ಮಳೆ, ಬಿರುಗಾಳಿ ಮತ್ತು ಆಲಿಕಲ್ಲು ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಪೂರ್ವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
https://www.newsics.com/2026/03/21/gold-prices-plunge-by-rs-2940-in-a-single-day/