https://youtube.com/shorts/1G3iDuCfqaQ?si=Tja2ncvA4iaSoDUf
newsics.com
ರಾಮನಗರ:ಪಿಕೆ ಟ್ರಾವೆಲ್ಸ್ ಬಸ್ ಬೆಂಗಳೂರಿನಿಂದ ಮೈಸೂರು ಕಡೆಗೆ ಸಾಗುತ್ತಿದ್ದಾಗ ರಸ್ತೆ ಬದಿಯ ಫೆನ್ಸಿಂಗ್ಗೆ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬಳಿ ನಡೆದಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಖಾಸಗಿ ಸಂಸ್ಥೆಗೆ ಸೇರಿದ ಪಿಕೆ ಟ್ರಾವೆಲ್ಸ್ ಬಸ್ ಬೆಂಗಳೂರಿನಿಂದ ಮೈಸೂರು ಕಡೆಗೆ ಸಾಗುತ್ತಿದ್ದಾಗ ರಸ್ತೆ ಬದಿಯ ಫೆನ್ಸಿಂಗ್ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ.
ಮೂಲಗಳ ಪ್ರಕಾರ, ಮುಂಜಾನೆ ಸಮಯದಲ್ಲಿ ಚಾಲಕನಿಗೆ ನಿದ್ದೆಯ ಮಂಪರು ಬಂದಿದ್ದರಿಂದ ಬಸ್ನ ಮೇಲಿನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಒಳಗೆ ಕುಳಿತಿದ್ದ ನಾಲ್ವರು ಪ್ರಯಾಣಿಕರು ಕೊನೆಯುಸಿರೆಳೆದಿದ್ದಾರೆ.
ಘಟನೆ ನಡೆದ ಕೂಡಲೇ ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಗೊಂಡಿರುವ ಇತರ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.