newsics.com
ಶಿವಮೊಗ್ಗ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ.
ಮೃತರನ್ನು ಭುವನೇಶ್ವರಿ (52), ಭುವನೇಶ್ವರಿ ಸಹೋದರ ಮಾರುತಿ (28) ಭುವನೇಶ್ವರಿ ಮಗ ದರ್ಶನ್ (22) ಎಂದು ಗುರುತಿಸಲಾಗಿದೆ.
ಭುವನೇಶ್ವರಿ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆಕೆಯ ಸಹೋದರ ಮಾರುತಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ.
ರಾತ್ರಿಯೇ ಮೂರು ಮಂದಿ ವಿಷ (Poison) ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸಂಬಂಧಿಕರು ಕರೆ ಮಾಡಿದಾಗ ಯಾರೊಬ್ಬರು ಸ್ವೀಕರಿಸಿರಲಿಲ್ಲ. ಕೆಲಸಕ್ಕೂ ಹೋಗಿರಲಿಲ್ಲ. ಹಾಗಾಗಿ ಇಂದು ಮನೆ ಬಳಿ ಆಕೆಯ ಮತ್ತೊಬ್ಬ ಸಹೋದರ ಬಂದು ಬಾಗಿಲು ತೆರೆದು ನೋಡಿದಾಗ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.