Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಶ್ಲೀಲ ಹಾಡಿನ ವಿವಾದ: 800ಕ್ಕೂ ಹೆಚ್ಚು ಲಿಂಕ್ಸ್ ಡಿಲೀಟ್ ಮಾಡಿದ ಪೊಲೀಸರು
ಪ್ರಮುಖಮನರಂಜನೆ

ಅಶ್ಲೀಲ ಹಾಡಿನ ವಿವಾದ: 800ಕ್ಕೂ ಹೆಚ್ಚು ಲಿಂಕ್ಸ್ ಡಿಲೀಟ್ ಮಾಡಿದ ಪೊಲೀಸರು

Share
1 Min Read
SHARE

newsics.com

ಗಾಯಕ ಬಾದ್‌ಶಾ ಅವರ ಹೊಸ ಹಾಡು ‘ಟಟೀರಿ’ ಭಾರಿ ವಿವಾದಕ್ಕೆ ಗುರಿಯಾಗಿದೆ. ಮಹಿಳೆಯರು ಮತ್ತು ಅಪ್ರಾಪ್ತರ ಬಗ್ಗೆ ಆಕ್ಷೇಪಾರ್ಹ ಸಾಹಿತ್ಯವನ್ನು ಹೊಂದಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಹರಿಯಾಣ ಪೊಲೀಸರು ಈ ಹಾಡಿನ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ.
ಹರಿಯಾಣ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ‘ಟಟೀರಿ’ (Tateeree) ಹಾಡಿನ ಒಟ್ಟು 857 ಲಿಂಕ್‌ಗಳನ್ನು ಈವರೆಗೆ ತೆಗೆದುಹಾಕಿದ್ದಾರೆ. ಇದರಲ್ಲಿ ಯೂಟ್ಯೂಬ್‌ನ 154 ವೀಡಿಯೊಗಳು ಮತ್ತು ಇನ್‌ಸ್ಟಾಗ್ರಾಮ್‌ನ 703 ರೀಲ್ಸ್‌ ಸೇರಿವೆ. ಮರು-ಅಪ್‌ಲೋಡ್ ಮಾಡಲಾದ ವೀಡಿಯೊಗಳು ಮತ್ತು ಶಾರ್ಟ್ಸ್ಗಳನ್ನು ಸಹ ಡಿಲೀಟ್ ಮಾಡುವಂತೆ ಸೋಶಿಯಲ್ ಮೀಡಿಯಾ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ.
ಮಹಿಳೆಯರ ಮತ್ತು ಅಪ್ರಾಪ್ತರ ಘನತೆಗೆ ಧಕ್ಕೆ ತರುವಂತಹ ಯಾವುದೇ ವಿಷಯವನ್ನು ಸಹಿಸುವುದಿಲ್ಲ ಎಂದು ಹರಿಯಾಣ ಪೊಲೀಸ್ ಮಹಾನಿರ್ದೇಶಕ (DGP) ಅಜಯ್ ಸಿಂಘಾಲ್ ತಿಳಿಸಿದ್ದಾರೆ. ನಿಯಮ ಉಲ್ಲಂಘಿಸುವ ಖಾತೆಗಳನ್ನು ನಿರ್ಬಂಧಿಸಲಾಗುವುದು ಮತ್ತು ಪದೇ ಪದೇ ತಪ್ಪು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಅಲ್ಲದೇ, ಈ ಹಾಡನ್ನು ಬಳಸಿ ಹೊಸ ವೀಡಿಯೊಗಳನ್ನು ಕ್ರಿಯೇಟ್ ಮಾಡದಂತೆ ಅಥವಾ ಶೇರ್ ಮಾಡದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹರಿಯಾಣದ ಪಂಚಕುಲ ನಗರದ ಸೆಕ್ಟರ್ 20 ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಹಾಡಿನ ವಿವಾದದಿಂದಾಗಿ ಬಾದ್ಶಾ ಅವರಿಗೆ ಅಪಖ್ಯಾತಿ ಬಂದಂತೆ ಆಗಿದೆ.
ಕಳೆದ ವಾರವಷ್ಟೇ ರಾಷ್ಟ್ರೀಯ ಮಹಿಳಾ ಆಯೋಗವು ಈ ಹಾಡಿನ ಅಶ್ಲೀಲತೆಯ ಬಗ್ಗೆ ಗಾಯಕ ಬಾದ್‌ಶಾ ಮತ್ತು ಹಾಡಿನ ನಿರ್ಮಾಪಕರಿಗೆ ಸಮನ್ಸ್ ನೀಡಿತ್ತು. ಈ ಹಾಡು ಭಾರತೀಯ ನ್ಯಾಯ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ಆಯೋಗ ಅಭಿಪ್ರಾಯಪಟ್ಟಿದೆ. ಸಂಕಷ್ಟಕ್ಕೆ ಸಿಲುಕಿದ ಬಾದ್‌ಶಾ ಈಗಾಗಲೇ ಈ ಬಗ್ಗೆ ಕ್ಷಮೆಯಾಚಿಸಿದ್ದು, ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ಹಾಡನ್ನು ಹಿಂಪಡೆದಿದ್ದಾರೆ.

ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಶೇಕಡಾ 200ರಷ್ಟು ಹೆಚ್ಚಳ

TAGGED:Obscene song controversy: Police delete over 800 links
Share This Article
Facebook Twitter Copy Link Print
Previous Article ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಶೇಕಡಾ 200ರಷ್ಟು ಹೆಚ್ಚಳ
Next Article ಇರಾನ್‌ ವಿರುದ್ದ ಯುದ್ದಕ್ಕೆ 5 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?