newsics.com
ಬೆಂಗಳೂರು: ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ‘ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11:50ರ ಸುಮಾರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬೆದರಿಕೆ ಮೇಲ್ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬೆದರಿಕೆ ಮೇಲ್ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಫೈವ್ ಸ್ಟಾರ್ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ಬೆಂಗಳೂರಿನ ಮೂರು ಹೋಟೆಲ್‌ಗಳಿಗೆ ಮುಂಜಾನೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಈ ಮೂಲಕ ಬೆಳ್ಳಂಬೆಳಗ್ಗೆ ಹೋಟೆಲ್ ಮಾಲೀಕರಿಗೆ, ಸಿಬ್ಬಂದಿ ಶಾಕ್ ಆಗಿತ್ತು.