https://youtube.com/shorts/1G3iDuCfqaQ?si=Tja2ncvA4iaSoDUf
newsics.com
ನವದೆಹಲಿ: ದೆಹಲಿ ಅಸೆಂಬ್ಲಿ ಹಾಗೂ ಸ್ಪೀಕರ್ ವಿಜೇಂದರ್ ಗುಪ್ತಾಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ. ವಿಧಾನಸಭೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿ ವಿಧಾನಸಭೆ ಕಟ್ಟಡ ಹಾಗೂ ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ಘಟನಾ ಸ್ಥಳಕ್ಕೆ ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ದೌಡಾಯಿಸಿದ್ದು ಪರಿಶೀಲನೆ ನಡೆಸಿದೆ.
ದೆಹಲಿ ವಿಧಾನಸಭಾ ಸ್ಪೀಕರ್ ಕಚೇರಿಯ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರಿಗೂ ಬೆದರಿಕೆ ಹಾಕಲಾಗಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೂ ಬೆದರಿಕೆ ಹಾಕಲಾಗಿದೆ.
ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರಿಗೂ ಬೆದರಿಕೆ ಹಾಕಲಾಗಿದೆ. ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬೆಳಗ್ಗೆ 7.49 ಕ್ಕೆ ಇಮೇಲ್ ಬಂದಿದ್ದು, ವಿಧಾನಸಭೆಗೆ ಬೆಳಗ್ಗೆ 7.28 ಕ್ಕೆ ಇಮೇಲ್ ಬಂದಿತು.ಬೆದರಿಕೆ ಕರೆ ಬಂದ ನಂತರ, ಭದ್ರತಾ ಸಿಬ್ಬಂದಿ ವಿಧಾನಸಭೆ ಸ್ಪೀಕರ್ ಕೊಠಡಿಗೆ ತೆರಳಿ ತನಿಖೆ ನಡೆಸಿದ್ದಾರೆ.
https://www.newsics.com/2026/03/24/mbbs-student-commits-suicide-in-bidar/