newsics.com
ಬೆಂಗಳೂರು: ಕರ್ನಾಟಕ ಸೇರಿ ಮೂರು ರಾಜ್ಯಗಳ ಮಹಿಳಾ ಕಾಂಗ್ರೆಸ್ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಮಹಿಳಾ ಕಾಂಗ್ರೆಸ್‌ಗೆ ಸೌಮ್ಯಾ ರೆಡ್ಡಿ, ಚಂಡೀಗಢಕ್ಕೆ ನಂದಿತಾ ಹೂಡ, ಅರುಣಾಚಲ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಚುಕು ನಾಚಿ ನೇಮಕವಾಗಿದ್ದಾರೆ.
ಸೌಮ್ಯಾ ರೆಡ್ಡಿ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು.