Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಜಿತ್ ಪವಾರ್ ವಿಮಾನ ಅಪಘಾತ ಆಕಸ್ಮಿಕವಲ್ಲ, ವ್ಯವಸ್ಥಿತ ಕೊಲೆ?
ದೇಶಪ್ರಮುಖ

ಅಜಿತ್ ಪವಾರ್ ವಿಮಾನ ಅಪಘಾತ ಆಕಸ್ಮಿಕವಲ್ಲ, ವ್ಯವಸ್ಥಿತ ಕೊಲೆ?

Share
2 Min Read
SHARE

newsics.com

ಅಜಿತ್ ಪವಾರ್ ವಿಮಾನ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ರೋಹಿತ್ ಪವಾರ್ ಅವರು ದೂರು ನೀಡಿದ್ದು, ಇದು ಆಕಸ್ಮಿಕ ಸಾವಲ್ಲ, ಬದಲಿಗೆ ವ್ಯವಸ್ಥಿತ ಸಂಚು ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಅಮೆರಿಕದಲ್ಲಿ ಸೇವೆಯಿಂದ ನಿವೃತ್ತಿಗೊಂಡಿದ್ದ, ಹಾರಾಟಕ್ಕೆ ಯೋಗ್ಯವಲ್ಲದ ವಿಮಾನವನ್ನು ಭಾರತಕ್ಕೆ ತಂದು ಬಳಸಲಾಗಿತ್ತು.
ವಿಮಾನದ ಸುರಕ್ಷಿತ ಮಿತಿ 5,000 ಗಂಟೆಗಳಿದ್ದರೂ, ಸುಮಾರು 8,000 ಗಂಟೆ ಹಾರಾಟ ನಡೆಸಿದ್ದ ದಾಖಲೆಗಳನ್ನು ತಿದ್ದಿ ವಾಣಿಜ್ಯ ಬಳಕೆಗೆ ಬಳಸಲಾಗಿತ್ತು.
ವಿಮಾನದ ಪೈಲಟ್ ಸುಮಿತ್ ಕಪೂರ್ ಈ ಹಿಂದೆ ಎರಡು ಬಾರಿ ಮದ್ಯಪಾನ ಮಾಡಿ ಸಿಕ್ಕಿಬಿದ್ದು ಅಮಾನತುಗೊಂಡಿದ್ದರು. ಇಂತಹ ಇತಿಹಾಸವಿದ್ದ ವ್ಯಕ್ತಿಯನ್ನು ಉಪಮುಖ್ಯಮಂತ್ರಿಗಳ ವಿಮಾನಕ್ಕೆ ಪೈಲಟ್ ಆಗಿ ನೇಮಿಸಿದ್ದು ಯಾಕೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.ಮೊದಲು ನಿಗದಿಯಾಗಿದ್ದ ಪೈಲಟ್‌ಗಳನ್ನು ಕೊನೆಯ ಕ್ಷಣದಲ್ಲಿ ಬದಲಿಸಿ, ಕಪೂರ್ ಮತ್ತು ತಂಡವನ್ನು ನೇಮಿಸಲಾಗಿತ್ತು. ಇದು ಉದ್ದೇಶಪೂರ್ವಕ ಸಂಚಿನ ಭಾಗವೇ ಎಂಬ ಅನುಮಾನ ಮೂಡಿಸಿದೆ.
ಅಜಿತ್ ಪವಾರ್ ಅವರು ರಸ್ತೆ ಮೂಲಕ ಹೋಗಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಅದು ವಿಮಾನ ಪ್ರಯಾಣವಾಗಿ ಬದಲಾಗಿದ್ದು ಹೇಗೆ? ಇದರ ಹಿಂದೆ ಯಾರಿದ್ದಾರೆ ಎಂಬ ತನಿಖೆ ನಡೆಯಬೇಕಿದೆ. ವಿಮಾನ ಪತನವಾಗುವ ಮುನ್ನ ಕೋ-ಪೈಲಟ್ “ಓ ಶಿಟ್” ಎಂದು ಕಿರುಚಿದ್ದಾರೆ. ಆದರೆ ಮುಖ್ಯ ಪೈಲಟ್ ಕಪೂರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪೈಲಟ್ ಅಮಲಿನಲ್ಲಿದ್ದರೇ ಅಥವಾ ಉದ್ದೇಶಪೂರ್ವಕವಾಗಿ ಸುಮ್ಮನಿದ್ದರೇ ಎಂಬ ಸಂಶಯ ವ್ಯಕ್ತವಾಗಿದೆ.
ಬಾರಾಮತಿಯಲ್ಲಿ ದಟ್ಟ ಮಂಜು ಕವಿದಿದ್ದು, ಕನಿಷ್ಠ 5 ಕಿ.ಮೀ ವಿಸಿಬಿಲಿಟಿ ಇಲ್ಲದಿದ್ದರೂ ಲ್ಯಾಂಡಿಂಗ್‌ಗೆ ಅವಕಾಶ ನೀಡಿದ್ದು ಯಾರು? ಟೇಬಲ್‌ಟಾಪ್ ರನ್‌ವೇ ಆಗಿದ್ದರೂ ಅಪಾಯಕಾರಿ ನಿರ್ಧಾರ ಕೈಗೊಳ್ಳಲು ಕಾರಣವೇನು? ಡಿಜಿಸಿಎ (DGCA) ತನಿಖೆಯಲ್ಲಿ ವಿಮಾನವು ಹಾರಾಟಕ್ಕೆ ಯೋಗ್ಯವಾಗಿರಲಿಲ್ಲ ಎಂದು ತಿಳಿದಿದ್ದರೂ ವಿಎಸ್ಆರ್ ವೆಂಚರ್ಸ್ ನಿಯಮಗಳನ್ನು ಗಾಳಿಗೆ ತೂರಿ ಕಾರ್ಯಾಚರಣೆ ನಡೆಸಿದೆ ಎಂದು ಆರೋಪಗಳು ಕೇಳಿ ಬಂದಿದೆ. ಇದೀಗ ಈ ಬಗ್ಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ರೋಹಿತ್ ಪವಾರ್ ಅವರು ದೂರು ನೀಡಿದ್ದಾರೆ.

ಜನವರಿ 28ರಂದು ಪುಣೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಮಾಜಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದರು.

11ನೇ ದಿನಕ್ಕೆ ಕೊನೆಯುಸಿರೆಳೆದ ಹರೀಶ್ ರಾಣಾ

TAGGED:Ajit Pawar plane crash not accidentalsystematic murder? File an FIR in Bangalore
Share This Article
Facebook Twitter Copy Link Print
Previous Article 11ನೇ ದಿನಕ್ಕೆ ಕೊನೆಯುಸಿರೆಳೆದ ಹರೀಶ್ ರಾಣಾ
Next Article 16,706 ಕೋಟಿ ರೂಪಾಯಿಗೆ ಮಾರಾಟವಾದ RCB: ಹೊಸ ಮಾಲೀಕರು ಯಾರು?

Popular Posts

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read

You Might Also Like

ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಪ್ರಮುಖ

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?