Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
ಕರ್ನಾಟಕದೇಶಪ್ರಮುಖ

ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Share
2 Min Read
SHARE

https://youtube.com/shorts/8vXYZAagRTI?si=TOMvue_f8l6FavIl

newsics.com

ನವದೆಹಲಿ: ದೇಶದಾದ್ಯಂತ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಮತ್ತು ತೈಲ ಕಂಪನಿಗಳು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿವೆ. ಗ್ಯಾಸ್ ಸಿಲಿಂಡರ್‌ಗಳ ಕಾಳಸಂತೆ ತಡೆಗಟ್ಟಲು ಮತ್ತು ಪಾರದರ್ಶಕತೆ ತರಲು ಈ ಕ್ರಮ ಕೈಗೊಳ್ಳಲಾಗಿದೆ. ಇಂಡೇನ್ , ಭಾರತ್ ಗ್ಯಾಸ್  ಮತ್ತು ಹೆಚ್‌ಪಿ  ಸೇರಿದಂತೆ ಎಲ್ಲಾ ಕಂಪನಿಗಳ ಗ್ರಾಹಕರಿಗೆ ಈ ನಿಯಮಗಳು ಅನ್ವಯವಾಗಲಿವೆ.

 

ಹೊಸ ನಿಯಮಗಳ ಮುಖ್ಯಾಂಶಗಳು:

ಬುಕಿಂಗ್ ನಡುವಿನ ಕಡ್ಡಾಯ ಅಂತರ:

ಹೊಸ ನಿಯಮದ ಪ್ರಕಾರ, ನಗರ ಪ್ರದೇಶದ ಗ್ರಾಹಕರು ಒಂದು ಸಿಲಿಂಡರ್ ಪಡೆದ ನಂತರ ಮುಂದಿನ ಬುಕಿಂಗ್ ಮಾಡಲು ಕನಿಷ್ಠ 25 ದಿನಗಳ ಕಾಲ ಕಾಯಬೇಕಾಗುತ್ತದೆ. ಇನ್ನು ಗ್ರಾಮೀಣ ಭಾಗದ ಗ್ರಾಹಕರಿಗೆ ಈ ಅಂತರವನ್ನು 45 ದಿನಗಳಿಗೆ ನಿಗದಿಪಡಿಸಲಾಗಿದೆ. ಈ ಮೊದಲು ಇದು 21 ದಿನಗಳಾಗಿತ್ತು.

 

ಇ-ಕೆವೈಸಿ  ಕಡ್ಡಾಯ:

ಎಲ್ಲಾ ಗ್ಯಾಸ್ ಗ್ರಾಹಕರು ತಮ್ಮ ಆಧಾರ್ ಸಂಖ್ಯೆಯೊಂದಿಗೆ ಬಯೋಮೆಟ್ರಿಕ್ ಅಥವಾ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಯಾರು ಇನ್ನೂ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿಲ್ಲವೋ, ಅಂತಹವರಿಗೆ ಸಿಲಿಂಡರ್ ವಿತರಣೆಯಲ್ಲಿ ತೊಂದರೆಯಾಗಬಹುದು. ಇದನ್ನು ಗ್ಯಾಸ್ ಏಜೆನ್ಸಿಗೆ ಹೋಗಿ ಅಥವಾ ಮೊಬೈಲ್ ಆಪ್ ಮೂಲಕ ಮನೆಯಲ್ಲೇ ಕುಳಿತು ಮಾಡಿಕೊಳ್ಳಬಹುದು.

 

ಡೆಲಿವರಿ ಸಮಯದಲ್ಲಿ OTP ಕಡ್ಡಾಯ:

ಸಿಲಿಂಡರ್ ವಿತರಣೆಯಲ್ಲಿ ನಡೆಯುವ ಅವ್ಯವಹಾರ ತಡೆಗಟ್ಟಲು ‘ಡಿಲಿವರಿ ಅಥೆಂಟಿಕೇಶನ್ ಕೋಡ್’ (DAC) ವ್ಯವಸ್ಥೆ ಜಾರಿಗೆ ತರಲಾಗಿದೆ. ಸಿಲಿಂಡರ್ ಮನೆಗೆ ಬಂದಾಗ ಗ್ರಾಹಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ OTP ಅನ್ನು ಡಿಲಿವರಿ ಬಾಯ್‌ಗೆ ನೀಡಿದರೆ ಮಾತ್ರ ವಿತರಣೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

 

ವಾರ್ಷಿಕ ಸಿಲಿಂಡರ್ ಮಿತಿ:

ಒಬ್ಬ ಗ್ರಾಹಕರು ವರ್ಷಕ್ಕೆ ಗರಿಷ್ಠ 15 ಸಿಲಿಂಡರ್‌ಗಳನ್ನು ಮಾತ್ರ ಪಡೆಯಲು ಅವಕಾಶವಿದೆ. ಇದರಲ್ಲಿ 12 ಸಿಲಿಂಡರ್‌ಗಳಿಗೆ ಮಾತ್ರ ಸಬ್ಸಿಡಿ ದೊರೆಯಲಿದ್ದು, ಉಳಿದ 3 ಸಿಲಿಂಡರ್‌ಗಳನ್ನು ಮಾರುಕಟ್ಟೆ ದರದಲ್ಲಿ ಖರೀದಿಸಬೇಕಾಗುತ್ತದೆ.

 

ಕೆವೈಸಿ  ಮಾಡುವುದು ಹೇಗೆ?

ಗ್ರಾಹಕರು ತಮ್ಮ ಗ್ಯಾಸ್ ಕಂಪನಿಯ ಅಧಿಕೃತ ಆಪ್‌ಗಳಾದ ‘IndianOil One’, ‘Hello BPCL’ ಅಥವಾ ‘Paytm/PhonePe’ ಮೂಲಕ ಅಥವಾ ನೇರವಾಗಿ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಆಧಾರ್ ಕಾರ್ಡ್ ಸಲ್ಲಿಸುವ ಮೂಲಕ ಕೆವೈಸಿ ಅಪ್‌ಡೇಟ್ ಮಾಡಬಹುದು.

https://www.newsics.com/2026/03/25/iran-tolls-in-the-middle-of-the-sea-charges-rs-18-crore-per-ship/

TAGGED:Central government releases new guidelines for gas cylinder booking
Share This Article
Facebook Twitter Copy Link Print
Previous Article ಸಮುದ್ರದ ಮಧ್ಯೆ ಇರಾನ್ ಟೋಲ್, ಒಂದು ಹಡಗಿಗೆ 18 ಕೋಟಿ ಶುಲ್ಕ : ಇದರ ಹಿಂದಿರೋ ಅಸಲಿ ಆಟವೇನು?
Next Article ಪ್ರಧಾನಿ ಮೋದಿಯವರಿಗೆ ಯಾರು ಅಡುಗೆ ಮಾಡುತ್ತಾರೆ? ಕುಕ್ ಹೇಗೆ ಆಯ್ಕೆ ಮಾಡಲಾಗುತ್ತದೆ?

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?