https://youtube.com/shorts/mi9ZHeAq9YU?si=AFQw5PdOpVrb1FjB
newsics.com
ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್ 2026ರ (IPL 19ನೇ ಆವೃತ್ತಿ) ಉದ್ಘಾಟನಾ ಸಮಾರಂಭವನ್ನು ಈ ಬಾರಿ ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ.
ಮಾರ್ಚ್ 28ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವೆ ಮೊದಲ ಪಂದ್ಯ ನಡೆಯಲಿದ್ದರೂ, ಯಾವುದೇ ಅದ್ಧೂರಿ ಸಮಾರಂಭ ಇರುವುದಿಲ್ಲ. ಕಳೆದ ವರ್ಷ ಆರ್ಸಿಬಿಯ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ
ಭೀಕರ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದ ದುರಂತದ ಹಿನ್ನೆಲೆಯಲ್ಲಿ, ಮೃತರ ಗೌರವಾರ್ಥವಾಗಿ ಬಿಸಿಸಿಐ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ದುರಂತದಲ್ಲಿ ಮೃತಪಟ್ಟವರ ಗೌರವಾರ್ಥವಾಗಿ ಮತ್ತು ಸಂವೇದನಾಶೀಲತೆಯ ದೃಷ್ಟಿಯಿಂದ ಈ ಬಾರಿ ಉದ್ಘಾಟನಾ ಸಮಾರಂಭವನ್ನು ಆಯೋಜಿಸದಿರಲು ಬಿಸಿಸಿಐ ತೀರ್ಮಾನಿಸಿದೆ.
ಉದ್ಘಾಟನಾ ಕಾರ್ಯಕ್ರಮ ಇಲ್ಲದಿದ್ದರೂ, ಮೇ 31ರಂದು ನಡೆಯಲಿರುವ ಫೈನಲ್ ಪಂದ್ಯದ ವೇಳೆ ಸಮಾರೋಪ ಸಮಾರಂಭ ನಡೆಸುವ ಸಾಧ್ಯತೆಯಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವ್ಜಿತ್ ಸೈಕಿಯಾ ತಿಳಿಸಿದ್ದಾರೆ.