https://youtube.com/shorts/mi9ZHeAq9YU?si=AFQw5PdOpVrb1FjB
newsics.com
ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ ಈ ಋತುಚಕ್ರ ರಜೆ ಆದೇಶ ರದ್ದುಪಡಿಸಲು ಮನವಿ ಮಾಡಿದ್ದಾರೆ.
ಮಹಿಳಾ ನೌಕರರ ಆರೋಗ್ಯ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಋತುಚಕ್ರ ರಜೆ’ ನೀತಿ ಈಗ ಕಾನೂನು ಸಂಘರ್ಷಕ್ಕೆ ನಾಂದಿ ಹಾಡಿದೆ.
ಸರ್ಕಾರದ ಈ ಕ್ರಮವು ಲಿಂಗ ತಾರತಮ್ಯಕ್ಕೆ ಎಡೆಮಾಡಿಕೊಡುತ್ತದೆ ಮತ್ತು ಈ ನೀತಿಯನ್ನು ರೂಪಿಸುವಾಗ ಸರ್ಕಾರ ಮಹಿಳೆಯರ ಅಭಿಪ್ರಾಯವನ್ನು ಪಡೆದಿಲ್ಲ ಎಂದು ಆಕ್ಷೇಪಿಸಿ ವರ್ಷಾ ಸೇರಿದಂತೆ 17 ಮಹಿಳಾ ಉದ್ಯೋಗಿಗಳು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂತಹ ರಜೆ ನೀತಿಗಳಿಂದಾಗಿ ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಮಹಿಳಾ ಉದ್ಯೋಗಿಗಳ ನೇಮಕಾತಿಗೆ ಸಂಸ್ಥೆಗಳು ಹಿಂದೇಟು ಹಾಕುವ ಸಾಧ್ಯತೆಯಿದೆ ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಕ್ರಮ ಲಿಂಗ ತಾರತಮ್ಯಗೆ ಎಡೆ ಮಾಡಿಕೊಡುತ್ತದೆ. ಪ್ರತಿ ಮಹಿಳೆಗೂ ಋತುಚಕ್ರ ರಜೆ ಬೇಕೆಂದು ಸರ್ಕಾರ ಊಹೆ ಮಾಡಿದೆ. ನೀತಿ ರೂಪಿಸುವಾಗ ಸರ್ಕಾರ ಮಹಿಳೆಯರ ಅಭಿಪ್ರಾಯ ಪಡೆದಿಲ್ಲ. ಕಡ್ಡಾಯ ರಜೆಯಿಂದ ಸ್ಪರ್ಧಾತ್ಮಕ ವೃತ್ತಿಜೀವನದಲ್ಲಿ ಮಹಿಳೆಯರಿಗೆ ಹಿನ್ನಡೆ ಉಂಟಾಗಲಿದೆ.
ಉದ್ಯೋಗದಾತರಿಗೆ ಹೊರೆ ಹೆಚ್ಚುತ್ತದೆ ಮತ್ತು ದಕ್ಷತೆ ಕಡಿಮೆಯಾಗುತ್ತದೆ. ಮಹಿಳೆಯರ ಸಬಲೀಕರಣಕ್ಕೂ ಋತುಚಕ್ರ ರಜೆ ಅಡ್ಡಿಯಾಗುತ್ತದೆ. ಹೀಗಾಗಿ ಕಡ್ಡಾಯ ಋತುಚಕ್ರ ರಜೆ ಆದೇಶ ರದ್ದುಪಡಿಸುವಂತೆ ಹೈಕೋರ್ಟ್ಗೆ ಮನವಿ ಮಾಡಲಾಗಿದೆ.
https://www.newsics.com/2026/03/26/sslc-third-language-hindi-exam-postponed/