Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದವರ ಮೇಲೆ ಸ್ಥಳೀಯ ಪುಂಡರು ಹಲ್ಲೆ!
ಕರ್ನಾಟಕಪ್ರಮುಖ

ಪ್ರೀ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದವರ ಮೇಲೆ ಸ್ಥಳೀಯ ಪುಂಡರು ಹಲ್ಲೆ!

Share
1 Min Read
SHARE

newsics.com

ಪ್ರವಾಸಕ್ಕೆ ಬಂದು ಫೋಟೋ ಶೂಟಿಂಗ್ ಮಾಡುತ್ತಿದ್ದವರ ಮೇಲೆ ಸ್ಥಳೀಯ ಕೆಲವು ಪುಂಡರು ವಿನಾಕಾರಣ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇಗುಲದ ಆವರಣದಲ್ಲಿ ನಡೆದಿದೆ.

ಪ್ರೀ-ವೆಡ್ಡಿಂಗ್ ಶೂಟ್ ಮಾಡಲು ಬಂದಿದ್ದ ಫೋಟೋಗ್ರಾಫರ್‌ಗಳ ಮೇಲೆ ಸ್ಥಳೀಯ ಯುವಕರು ಎನ್ನಲಾದ ಗುಂಪೊಂದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.
ಸ್ಥಳೀಯ ಪುಂಡರು ಹಲ್ಲೆ ಮಾಡಿದ್ದು ಯಾಕೆ?
ಬೆಳ್ಳಂಬೆಳಗ್ಗೆ ದೇವಸ್ಥಾನದ ಸುಂದರ ಪರಿಸರದಲ್ಲಿ ಫೋಟೋಗ್ರಾಫರ್‌ಗಳು ಪ್ರೀ-ವೆಡ್ಡಿಂಗ್ ಶೂಟಿಂಗ್‌ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಅಲ್ಲಿಗೆ ಬಂದ ಕೆಲವು ಸ್ಥಳೀಯರು, ‘ಇಲ್ಲಿ ಯಾಕೆ ಶೂಟಿಂಗ್ ಮಾಡುತ್ತಿದ್ದೀರಿ? ಯಾರು ಹೇಳಿದ್ದು ಎಂದು ಪ್ರಶ್ನಿಸಿದ್ದಾರೆ. ದೇವಸ್ಥಾನದಲ್ಲಿ ಫೋಟೋ ತೆಗೆಯಲು ಯಾರ ಅನುಮತಿ ಬೇಕು, ಪ್ರವಾಸಕ್ಕೆ ಬಂದಿದ್ದೇವೆ ಫೋಟೋ ತೆಗೆದರೆ ಏನಾಯ್ತು ಎಂದು ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.
ಫೋಟೋಗ್ರಾಫರ್‌ಗಳ ಮೇಲೆ ಗೂಂಡಾಗಿರಿ
ಮಾತಿನ ಚಕಮಕಿ ತಾರಕಕ್ಕೇರಿದಾಗ ಸ್ಥಳೀಯರು ಎಂದು ಹೇಳಿಕೊಂಡ ಯುವಕರ ಗುಂಪು ಫೋಟೋಗ್ರಾಫರ್‌ಗಳ ಮೇಲೆ ಏಕಾಏಕಿ ಮುಗಿಬಿದ್ದು ಹಲ್ಲೆ ನಡೆಸಿದ್ದಾರೆ. ‘ಯಾಕಪ್ಪಾ ಹೊಡೆಯುತ್ತಿದ್ದೀರಿ, ಏನಾಗಿದೆ?’ ಎಂದು ಕೇಳಿದರೂ ಫೋಟೋಗ್ರಾಫರ್‌ಗಳಿಗೆ ಮನಬಂದಂತೆ ಥಳಿಸಿದ್ದಾರೆ. ಅವರು ಯಾಕೆ ಹೊಡೆಯುತ್ತಿದ್ದಾರೆಂದೇ ತಿಳಿದಿಲ್ಲ. ಪ್ರಶ್ನಿಸಿದಷ್ಟೂ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಕಾಣಬಹುದು.
ಶಾಂತಿಯುತವಾಗಿದ್ದ ದೇವಸ್ಥಾನದ ಆವರಣ ಪುಂಡರಿಂದಾಗಿ ಕೆಲಕಾಲ ಪ್ರವಾಸಿಗರಲ್ಲಿ ಆತಂಕ ತರಿಸಿತು. ಪ್ರವಾಸಿಗರ ಮೇಲೆ ಸ್ಥಳೀಯರು ಎನ್ನಲಾದ ವ್ಯಕ್ತಿಗಳು ಗೂಂಡಾಗಿರಿ ನಡೆಸುತ್ತಿರುವುದನ್ನು ಕಂಡು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೂಟಿಂಗ್ ಉಪಕರಣಗಳನ್ನು ಹಾನಿಗೊಳಿಸಲು ಯತ್ನಿಸಿದ ಘಟನೆಯೂ ನಡೆದಿದೆ ಎನ್ನಲಾಗಿದೆ.
ಪೊಲೀಸ್ ಮೆಟ್ಟಿಲೇರಿದ ಪ್ರಕರಣ
ಈ ಗಲಾಟೆಗೆ ಸಂಬಂಧಿಸಿದಂತೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎರಡೂ ಕಡೆಯವರು ಪರಸ್ಪರ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರ ನಡುವಿನ ಇಂತಹ ಘರ್ಷಣೆಗಳು ಪ್ರವಾಸೋದ್ಯಮದ ಮೇಲೆ ಕರಿನೆರಳು ಬೀರುತ್ತಿವೆ.

ಮಹಿಳಾ ಪ್ರಯಾಣಿಕರ ಮುಂದೆ ಕೊಲೆ ರಹಸ್ಯ ಬಿಚ್ಚಿಟ್ಟ ಉಬರ್ ಚಾಲಕ; ವೈರಲ್ ವಿಡಿಯೋ ನೋಡಿ

TAGGED:Local thugs attack those doing a pre-wedding shoot!
Share This Article
Facebook Twitter Copy Link Print
Previous Article ಮಹಿಳಾ ಪ್ರಯಾಣಿಕರ ಮುಂದೆ ಕೊಲೆ ರಹಸ್ಯ ಬಿಚ್ಚಿಟ್ಟ ಉಬರ್ ಚಾಲಕ; ವೈರಲ್ ವಿಡಿಯೋ ನೋಡಿ
Next Article ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹಾದುಹೋದ ತೈಲ ಟ್ಯಾಂಕರ್ಗೆ ಬೆಂಕಿ

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?