https://youtube.com/shorts/7-1-Ue0Sh8o?si=IPl4cpVzjeJG3YdO
newsics.com
ಅಲಹಾಬಾದ್:ವಯಸ್ಕ ಮಹಿಳೆಯೊಂದಿಗೆ ಸಮ್ಮತಿಯ, ಲಿವ್-ಇನ್ ಸಂಬಂಧವನ್ನು ಇಟ್ಟುಕೊಂಡಿದ್ದಕ್ಕಾಗಿ ವಿವಾಹಿತ ಪುರುಷನ ವಿರುದ್ಧ ಕೇಸ್ ದಾಖಲಿಸಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಶಹಜಹಾನ್‌ಪುರದ ಲಿವ್-ಇನ್ ದಂಪತಿ ಸಲ್ಲಿಸಿದ ಕ್ರಿಮಿನಲ್ ರಿಟ್ ಅರ್ಜಿಯ ವಿಚಾರಣೆ ವೇಳೆ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.
ಆತನಿಗೆ ಮದುವೆಯಾಗಿದೆ ಎಂಬ ವಿಷಯ ತಿಳಿದಿದ್ದರೂ ಮಹಿಳೆ ಆತನೊಂದಿಗೆ ಲಿವ್-ಇನ್ ರಿಲೇಷನ್ಶಿಪ್ನಲ್ಲಿದ್ದರೆ ಅದು ತಪ್ಪಲ್ಲ ಎಂದು ಕೋರ್ಟ್ ಹೇಳಿದೆ. ಆ ಮಹಿಳೆಯ ಕುಟುಂಬದಿಂದಲೇ ಬೆದರಿಕೆ ಎದುರಿಸುತ್ತಿರುವ ಲಿವ್-ಇನ್ ದಂಪತಿಗೆ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸಲ್ಲಿಸಲಾಗಿತ್ತು.
ಈ ಪ್ರಕರಣವನ್ನು ಆಲಿಸಿದ ನ್ಯಾಯಾಲಯ ವಿವಾಹಿತ ಪುರುಷನು ಪರಸ್ಪರ ಒಪ್ಪಿಗೆಯ ಮೂಲಕ ವಯಸ್ಕ ಮಹಿಳೆಯ ಜೊತೆ ಒಟ್ಟಿಗೆ ವಾಸಿಸುವುದು ಯಾವುದೇ ಅಪರಾಧವಲ್ಲ ಎಂದು ಹೇಳಿದೆ.
ವಿವಾಹಿತ ಪುರುಷನು ಮಹಿಳೆಯ ಒಪ್ಪಿಗೆಯ ಮೂಲಕ ಲಿವ್-ಇನ್ ಸಂಬಂಧದಲ್ಲಿ ವಾಸಿಸುವುದು ಮೊಕದ್ದಮೆ ಹೂಡಬಹುದಾದ ಯಾವುದೇ ಅಪರಾಧವಲ್ಲ. ನೈತಿಕತೆ ಮತ್ತು ಕಾನೂನನ್ನು ದೂರವಿಡಬೇಕು. ಹಾಗಂತ ಕಾನೂನಿನಡಿ ಅದು ಅಪರಾಧವಲ್ಲ ಎಂಬ ಮಾತ್ರಕ್ಕೆ ಸಾಮಾಜಿಕವಾಗಿಯೂ ಅದು ಸರಿ ಎಂದು ಹೇಳಲಾಗದು ಎಂದು ನ್ಯಾಯಪೀಠ ಹೇಳಿದೆ.
https://www.newsics.com/2026/03/28/will-the-price-of-gold-fall-in-the-next-5-years/