Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಡಿವಾರ್ನ್ ಕ್ಯಾಮೆರಾ ಆಫ್ ಮಾಡಿ ಲಂಚ ಪಡೆಯುತ್ತಿದ್ದ ಮೂವರು ಟ್ರಾಫಿಕ್ ಪೊಲೀಸರು ಸಸ್ಪೆಂಡ್
ಕರ್ನಾಟಕಪ್ರಮುಖ

ಬಾಡಿವಾರ್ನ್ ಕ್ಯಾಮೆರಾ ಆಫ್ ಮಾಡಿ ಲಂಚ ಪಡೆಯುತ್ತಿದ್ದ ಮೂವರು ಟ್ರಾಫಿಕ್ ಪೊಲೀಸರು ಸಸ್ಪೆಂಡ್

Share
1 Min Read
SHARE

https://youtube.com/shorts/wcgOU8WO_jc?si=ko9vW9TLLev8Rg2l

newsics.com

ಸಂಚಾರಿ ನಿಯಮಗಳ ಹೆಸರಿನಲ್ಲಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಮತ್ತು ಬಾಡಿವಾರ್ನ್ ಕ್ಯಾಮೆರಾ ಆಫ್ ಮಾಡಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ  ಬೆಂಗಳೂರಿನ   ಹೈಗ್ರೌಂಡ್ಸ್ ಸಂಚಾರಿ ಠಾಣೆಯ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ  ಅನೂಪ್ ಶೆಟ್ಟಿ ಈ ಅಮಾನತ್ತು ಆದೇಶ ಹೊರಡಿಸಿದ್ದಾರೆ. ಅಮಾನತ್ತಾದವರಲ್ಲಿ ಹೈಗ್ರೌಂಡ್ಸ್ ಸಂಚಾರಿ ಠಾಣೆಯ ಎಎಸ್‌ಐ  ಸುರೇಶ್, ಕಾನ್ಸ್‌ಟೇಬಲ್‌ಗಳಾದ ಪ್ರಶಾಂತ್ ಹಾಗೂ ಸಾದಿಕ್ ಸೇರಿದ್ದಾರೆ.

ಬೆಂಗಳೂರಿನ ಪ್ರಮುಖ ವೃತ್ತಗಳಲ್ಲಿ ಒಂದಾದ ಚಾಲುಕ್ಯ ಸರ್ಕಲ್ ಸುತ್ತಮುತ್ತ ಕರ್ತವ್ಯ ನಿರ್ವಹಿಸುವಾಗ ಈ ಸಿಬ್ಬಂದಿಗಳು ವಾಹನ ಸವಾರರಿಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದರು ಎಂಬ ದೂರುಗಳು ಕೇಳಿ ಬಂದಿದ್ದವು. ಮುಖ್ಯವಾಗಿ, ಸಂಚಾರಿ ಪೊಲೀಸರು ಕರ್ತವ್ಯದ ವೇಳೆ ಕಡ್ಡಾಯವಾಗಿ ಧರಿಸಬೇಕಾದ ‘ಬಾಡಿವಾರ್ನ್ ಕ್ಯಾಮೆರಾ’ಗಳನ್ನು  ಉದ್ದೇಶಪೂರ್ವಕವಾಗಿ ಆಫ್ ಮಾಡಿ, ನಿಯಮ ಉಲ್ಲಂಘಿಸಿದ ಸವಾರರಿಂದ ಲಂಚ ಪಡೆಯುತ್ತಿದ್ದರು ಎಂಬ ಗಂಭೀರ ಆರೋಪ ಎದುರಿಸುತ್ತಿದ್ದರು.

ವಾಹನಗಳನ್ನು ತಡೆದು ಹಣ ವಸೂಲಿ ಮಾಡುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಇಲಾಖೆಯು ಆಂತರಿಕ ತನಿಖೆ ನಡೆಸಿತ್ತು. ತನಿಖೆಯ ವೇಳೆ ಈ ಮೂವರು ಸಿಬ್ಬಂದಿಗಳು ಕರ್ತವ್ಯ ಲೋಪ ಎಸಗಿರುವುದು ಮತ್ತು ಲಂಚ ಪಡೆದಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಶಿಸ್ತು ಕ್ರಮವಾಗಿ ಮೂವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಡಿಸಿಪಿ ಅನೂಪ್ ಶೆಟ್ಟಿ ಆದೇಶಿಸಿದ್ದಾರೆ.

https://www.newsics.com/2026/03/31/us-attack-on-mashhad-airport-damage-to-flight-scheduled-to-arrive-in-delhi-tomorrow/

TAGGED:Three traffic police officers suspended for taking bribes by turning off body-worn cameras
Share This Article
Facebook Twitter Copy Link Print
Previous Article War news ಇರಾನ್‌ನ ಮಶ್ಹಾದ್ ಏರ್‌ಪೋರ್ಟ್ ಮೇಲೆ ಅಮೆರಿಕ ದಾಳಿ: ನಾಳೆ ದೆಹಲಿಗೆ ಬರಬೇಕಿದ್ದ ವಿಮಾನಕ್ಕೆ ಹಾನಿ
Next Article ಕಾಲು ಜಾರಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್ : ವಿಡಿಯೋ ನೋಡಿ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?