https://youtube.com/shorts/wcgOU8WO_jc?si=ko9vW9TLLev8Rg2l
newsics.com
ಇಸ್ಲಾಮಾಬಾದ್: ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಈಜಿಪ್ಟ್ ವಿದೇಶಾಂಗ ಸಚಿವರನ್ನು ಸ್ವಾಗತಿಸುವಾಗ ಕಾಲು ಜಾರಿ ಬಿದ್ದಿದ್ದು, ಈ ವಿಡಿಯೋ ವೈರಲ್ ಆಗಿದೆ. ಅದೃಷ್ಟವಶಾತ್, ಅವರು ಬಿದ್ದಿದ್ದರಿಂದ ಯಾವುದೇ ಗಂಭೀರ ಗಾಯಗಳಾಗಿಲ್ಲ.
ಇರಾನ್-ಇಸ್ರೇಲ್-ಅಮೆರಿಕದ ನಡುವೆ ನಡೆಯುತ್ತಿರುವ ಉದ್ವಿಗ್ನತೆ ಕಡಿಮೆ ಮಾಡಲು ತಾವು ಮಧ್ಯಸ್ಥಿಕೆ ವಹಿಸುತ್ತೇವೆ ಎಂದು ಪಾಕಿಸ್ತಾನ ಮುಂದೆ ಬಂದಿದೆ.
ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿ, ಇಶಾಕ್ ದಾರ್ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಅವರು ಪ್ರಸ್ತುತ ಈಜಿಪ್ಟ್, ಟರ್ಕಿ ಮತ್ತು ಸೌದಿ ಅರೇಬಿಯಾದ ನಾಯಕರೊಂದಿಗೆ ಪ್ರಮುಖ ಚರ್ಚೆಗಳನ್ನು ನಡೆಸುತ್ತಿದ್ದಾರೆ.