https://youtube.com/shorts/wcgOU8WO_jc?si=ko9vW9TLLev8Rg2l
newsics.com
ಉಡುಪಿ: ಮದುವೆಯಾದ ಕೇವಲ ಒಂದು ತಿಂಗಳಿಗೆ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತ ಉದ್ಯಮಿಯು ಸುಮಾರು ಒಂದು ತಿಂಗಳ ಹಿಂದಷ್ಟೇ ನಾಟಕ ಕಲಾವಿದೆ ಹಾಗೂ ಮೇಕಪ್ ಆರ್ಟಿಸ್ಟ್ ಆಗಿದ್ದ ಯುವತಿಯನ್ನು ಮದುವೆಯಾಗಿದ್ದರು. ದಾಂಪತ್ಯ ಜೀವನದ ಆರಂಭಿಕ ದಿನಗಳಲ್ಲೇ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಮೂಡಿದ್ದವು ಎನ್ನಲಾಗಿದೆ. ವಿವಾಹವಾದ ಕೆಲವೇ ದಿನಗಳಲ್ಲಿ ಉದ್ಯಮಿ ಆತ್ಮಹತ್ಯೆಯಂತಹ ತೀವ್ರ ನಿರ್ಧಾರಕ್ಕೆ ಬಂದಿರುವುದು ಕುಟುಂಬದವರಲ್ಲಿ ತೀವ್ರ ಆಘಾತ ಮೂಡಿಸಿದೆ.
ಉದ್ಯಮಿಯ ಸಾವಿನ ಹಿನ್ನೆಲೆಯಲ್ಲಿ ಅವರ ಕುಟುಂಬದವರು ಪತ್ನಿಯ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತ್ನಿಯ ಕಿರುಕುಳ ಅಥವಾ ಅವರ ನಡುವಿನ ಸಂಘರ್ಷವೇ ಈ ಆತ್ಮಹತ್ಯೆಗೆ ಪ್ರೇರಣೆಯಾಗಿರಬಹುದು ಎಂದು ದೂರಿನಲ್ಲಿ ಶಂಕಿಸಲಾಗಿದೆ.ಇದೀಗ ಉದ್ಯಮಿಯ ಸಾವಿನ ಸುತ್ತ ಹತ್ತಾರು ಅನುಮಾನಗಳು ಸೃಷ್ಟಿಯಾಗಿವೆ.