https://youtube.com/shorts/w77Qj39UtDA?si=G-t7V0TrkmzYuWQ5
newsics.com
ಮಹಾರಾಷ್ಟ್ರ: ಸಹಾಯಕ ಪೊಲೀಸ್ ಉಪನಿರೀಕ್ಷಕರೊಬ್ಬರು ವಶದಲ್ಲಿದ್ದ ಮಹಿಳೆಯ ಬಳಿ ಆಕೆಯ ಮಗಳನ್ನು ಲೈಂಗಿಕ ಸುಖಕ್ಕಾಗಿ ತನ್ನ ಮನೆಗೆ ಕಳುಹಿಸುವಂತೆ ಬೇಡಿಕೆಯಿಟ್ಟಿ ಘಟನೆ ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದಿದೆ.
ಆರೋಪಿ ಪೊಲೀಸ್ ಅಧಿಕಾರಿಯನ್ನು ರಾಜೇಶ್ ಜಾಧವ್ ಎಂದು ಗುರುತಿಸಲಾಗಿದೆ. 80 ಲಕ್ಷ ರೂಪಾಯಿ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ರಾಜೇಶ್ ಜಾಧವ್, ಆ ಮಹಿಳೆಯ ಬಳಿ ಅಸಭ್ಯವಾಗಿ ಮಾತನಾಡಿದ್ದಾರೆ.
“ನೀನು ನೋಡಲು ತುಂಬಾ ಸುಂದರವಾಗಿದ್ದೀಯಾ, ನಿನ್ನ ಮಗಳು ಕೂಡ ಸುಂದರವಾಗಿಯೇ ಇರಬೇಕು. ಆಕೆಯನ್ನು ನನ್ನ ಮನೆಗೆ ಕಳುಹಿಸಿಕೊಡು, ನಾನು ನಿನಗೆ 10,000 ರೂಪಾಯಿ ಹಣ ನೀಡುತ್ತೇನೆ” ಎಂದು ಹಣದ ಆಮಿಷವೊಡ್ಡಿ ಲೈಂಗಿಕ ಸುಖಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
ಎಎಸ್ಐ ಮಾತಿನಿಂದ ಬೆಚ್ಚಿಬಿದ್ದ ಮಹಿಳೆ, ತಕ್ಷಣವೇ ಪೊಲೀಸ್ ಠಾಣೆಯಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ದೂರು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ಸದ್ಯ ಅವರು ತಲೆಮರೆಸಿಕೊಂಡಿದ್ದಾರೆ.