Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಸ್ಟಾಗ್ರಾಮ್‌ನಲ್ಲಿ ಶುರುವಾದ ಪ್ರೀತಿ : ಮದುವೆಯಾದ ಒಂದು ತಿಂಗಳಲ್ಲಿ ಉದ್ಯಮಿ  ಸಾವಿನಲ್ಲಿ ಅಂತ್ಯ! 13 ದಿನಗಳಲ್ಲಿ ಸತ್ತಿದ್ದು ಹೇಗೆ?
ಕರ್ನಾಟಕಪ್ರಮುಖ

ಇನ್ಸ್ಟಾಗ್ರಾಮ್‌ನಲ್ಲಿ ಶುರುವಾದ ಪ್ರೀತಿ : ಮದುವೆಯಾದ ಒಂದು ತಿಂಗಳಲ್ಲಿ ಉದ್ಯಮಿ  ಸಾವಿನಲ್ಲಿ ಅಂತ್ಯ! 13 ದಿನಗಳಲ್ಲಿ ಸತ್ತಿದ್ದು ಹೇಗೆ?

Share
2 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಖ್ಯಾತ ಕಲಾವಿದೆ ಸೌಮ್ಯ ಶೆಟ್ಟಿ ಅವರ ಪತಿ ಸುದೀಪ್ ಶೆಟ್ಟಿ ಮದುವೆಯಾದ ಒಂದೇ ತಿಂಗಳಲ್ಲಿ ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಸುದೀಪ್ ತಂದೆ ತಮ್ಮ ಸೊಸೆಯ ವಿರುದ್ಧವೇ ಗಂಭೀರ ಆರೋಪ ಮಾಡಿದ್ದು, ಸೌಮ್ಯ ಶೆಟ್ಟಿ ಈ ಆರೋಪಗಳನ್ನು ನಿರಾಕರಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ಸುದೀಪ್ ಶೆಟ್ಟಿ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಇತ್ತ ಆಕೆ ರಂಗಭೂಮಿ ಹಾಗೂ ಕಿರುತೆರೆಯಲ್ಲಿ ನಟಿಸುವ ನಟಿ ಸೌಮ್ಯಾ ಶೆಟ್ಟಿ. ಇವರಿಬ್ಬರಿಗೂ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಈ ಸ್ನೇಹ ಕ್ರಮೇಣ ಪ್ರೀತಿಯಾಗಿ ಅರಳಿತ್ತು. ಇಬ್ಬರೂ ಮದುವೆಯಾಗಲು ನಿರ್ಧರಿಸಿದಾಗ ಮನೆಯವರಲ್ಲಿ ವಿಷಯ ತಿಳಿಸಿದ್ದರು. ಆದರೆ, ಸುದೀಪ್ ಮನೆಯವರು ಈ ಸಂಬಂಧಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಸುದೀಪ್ ಮನೆಯವರು ಮದುವೆಗೆ ಒಪ್ಪದಿದ್ದಾಗ, ಹತಾಶೆಗೊಂಡ ಸುದೀಪ್ ಜೂನ್ 16ರಂದೇ ವಿಷ ಸೇವಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ. ಆದರೆ, ವಿಷ ಸೇವಿಸಿದ ವಿಚಾರವನ್ನು ಯಾರಿಗೂ ತಿಳಿಸದೆ, ಅದೇ ಸ್ಥಿತಿಯಲ್ಲೇ ಹುಡುಗಿಯನ್ನು ಭೇಟಿಯಾಗಿ ಮದುವೆಗೆ ಒಪ್ಪಿಸಿ, ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಮದುವೆಯಾದ ನಂತರ ಒಂದು ವಾರ ಸುದೀಪ್ ಚೆನ್ನಾಗಿಯೇ ಇದ್ದರು. ಆದರೆ, ಹಠಾತ್ ಆರೋಗ್ಯ ಕ್ಷೀಣಿಸಿದಾಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನೀಡಿದ ವೈದ್ಯರಿಗೂ ಮೊದಲು ಇದು ವಿಷದ ಪರಿಣಾಮ ಎಂದು ತಿಳಿದಿರಲಿಲ್ಲ. ಆದರೆ ಕೊನೆಯ ಕ್ಷಣದಲ್ಲಿ ಸುದೀಪ್ ತಾನು ವಿಷ ಸೇವಿಸಿದ್ದಾಗಿ ಬಾಯಿಬಿಟ್ಟಿದ್ದರು ಎನ್ನಲಾಗಿದೆ.

ಈ ಸಾವಿನ ಹಿಂದೆ ಸುದೀಪ್ ಹೆತ್ತವರು ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ‘ನನ್ನ ಮಗ ಮದುವೆಯಾದ ಹುಡುಗಿ ಈಗಾಗಲೇ ಎರಡು ಮೂರು ಮದುವೆಗಳಾಗಿ ಜನರಿಗೆ ಮೋಸ ಮಾಡಿದ್ದಾಳೆ. ಅವಳ ಹಿನ್ನೆಲೆ ಸರಿ ಇಲ್ಲ ಎಂಬ ಕಾರಣಕ್ಕೆ ನಾವು ಮದುವೆ ಬೇಡ ಎಂದಿದ್ದೆವು. ಅವಳೇ ನನ್ನ ಮಗನನ್ನು ಟ್ರ್ಯಾಪ್ ಮಾಡಿ, ಆತನ ಸಾವಿಗೆ ಕಾರಣವಾಗಿದ್ದಾಳೆ’ ಎಂದು ಪೋಷಕರು ಕಣ್ಣೀರಿಡುತ್ತಿದ್ದಾರೆ. ಆದರೆ ಪತ್ನಿ ಹೇಳುವುದೇ ಬೇರೆ. ‘ಮನೆಯವರು ಒಪ್ಪಲಿಲ್ಲ ಎಂಬ ನೋವಿನಲ್ಲೇ ಆತ ವಿಷ ಸೇವಿಸಿದ್ದಾನೆ, ಇದರಲ್ಲಿ ನನ್ನದೇನು ತಪ್ಪಿಲ್ಲ’ ಎಂದು ಆಕೆ ವಾದಿಸುತ್ತಿದ್ದಾಳೆ.

ಸಾಮಾನ್ಯವಾಗಿ ವಿಷ ಸೇವಿಸಿದ ತಕ್ಷಣ ಮನುಷ್ಯ ಸಾವನ್ನಪ್ಪುತ್ತಾನೆ ಅಥವಾ ತಕ್ಷಣವೇ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಆದರೆ ಸುದೀಪ್ 16ನೇ ತಾರೀಕು ವಿಷ ಕುಡಿದು, ಮದುವೆಯಾಗಿ, 13 ದಿನಗಳ ನಂತರ ಅಂದರೆ ಮದುವೆಯಾದ ವಾರಕ್ಕೆ ಸಾವನ್ನಪ್ಪಿದ್ದು ಹೇಗೆ ಎಂಬುದು ವೈದ್ಯಕೀಯ ಲೋಕಕ್ಕೂ ಸವಾಲಾಗಿದೆ. ಈಗ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.

ಸುದೀಪ್ ಸಾವು ಕೇವಲ ಆತ್ಮಹತ್ಯೆಯೋ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಸಂಚಿದೆಯೇ ಎಂಬುದು ಈಗ ‘ಎಫ್.ಐ.ಆರ್’ (FIR) ದಾಖಲಿಸಿರುವ ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ.

https://www.newsics.com/2026/04/02/rohini-sindhuri-cloth-bag-scam-order-to-grant-permission-for-investigation/

TAGGED:A love that started on Instagram: ended in the death of a businessman within a month of marriage!
Share This Article
Facebook Twitter Copy Link Print
Previous Article ರೋಹಿಣಿ ಸಿಂಧೂರಿ ಬಟ್ಟೆ ಬ್ಯಾಗ್ ಹಗರಣ: ತನಿಖೆಗೆ ಅನುಮತಿ ನೀಡಲು ಆದೇಶ
Next Article ಬಕೆಟ್ ನಲ್ಲಿ ಮುಳುಗಿ ಮಗು ಸಾವು : ಮನನೊಂದು ತಾಯಿ ಆತ್ಮ*ಹತ್ಯೆ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?