https://youtube.com/shorts/w77Qj39UtDA?si=G-t7V0TrkmzYuWQ5
newsics.com
ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಿದ್ದು, ರಣಬೀರ್ ಕಪೂರ್ ಶ್ರೀರಾಮನಾಗಿ ಕಾಣಿಸಿಕೊಂಡಿದ್ದಾರೆ. ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದರೆ, ಲಂಕಾಧಿಪತಿ ರಾವಣನ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಬ್ಬರಿಸಲಿದ್ದಾರೆ
ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನ ಮಾಡಿದ್ದು, ಈ ಚಿತ್ರಕ್ಕೆ ವಿಶ್ವವಿಖ್ಯಾತ ಸಂಗೀತ ನಿರ್ದೇಶಕ ಹ್ಯಾನ್ಸ್ ಜಿಮ್ಮರ್ ಮತ್ತು ಭಾರತದ ಎ.ಆರ್. ರೆಹಮಾನ್ ಜಂಟಿಯಾಗಿ ಸಂಗೀತ ನೀಡುತ್ತಿರುವುದು ವಿಶೇಷ. ಆಸ್ಕರ್ ಪ್ರಶಸ್ತಿ ವಿಜೇತ ಕಂಪನಿ ‘DNEG’ ಈ ಚಿತ್ರದ ವಿಎಫ್‌ಎಕ್ಸ್ ಜವಾಬ್ದಾರಿ ಹೊತ್ತಿದೆ.
ಟೀಸರ್‌ನಲ್ಲಿ ರಣಬೀರ್ ಕಪೂರ್ ಅವರ ಶಾಂತ ಮತ್ತು ಗಂಭೀರ ರೂಪದ ರಾಮನ ಲುಕ್ ಅಭಿಮಾನಿಗಳ ಗಮನ ಸೆಳೆದಿದೆ.ರಾವಣನ ಪಾತ್ರದಲ್ಲಿ ಯಶ್ ಅವರ ಧ್ವನಿ ಮತ್ತು ಬೃಹತ್ ವ್ಯಕ್ತಿತ್ವವು ಕುತೂಹಲವನ್ನು ಇಮ್ಮಡಿಗೊಳಿಸಿದೆ.ಚಿತ್ರವು ಅತ್ಯಾಧುನಿಕ ‘ಐಮ್ಯಾಕ್ಸ್’ ತಂತ್ರಜ್ಞಾನದಲ್ಲಿ ಚಿತ್ರೀಕರಣಗೊಳ್ಳುತ್ತಿದ್ದು, ದೃಶ್ಯಗಳು ಅತ್ಯಂತ ಶ್ರೀಮಂತವಾಗಿ ಮೂಡಿಬಂದಿವೆ.
https://youtu.be/YleIZgpTF6w?si=btZc_uCb3lkCcPG3
https://www.newsics.com/2026/04/02/import-duty-on-these-40-products-to-be-abolished-from-today/