https://youtube.com/shorts/w77Qj39UtDA?si=G-t7V0TrkmzYuWQ5
newsics.com
ಬೆಂಗಳೂರು: ನೇರಳೆ ಮಾರ್ಗದಲ್ಲಿ ಏ. 5 ರಂದು ಬೆಳಿಗ್ಗೆ 2 ಗಂಟೆಗಳ ಕಾಲ ನಾಡಪ್ರಭು ಕೆಂಪೇಗೌಡ ನಿಲ್ದಾಣ(ಮೆಜೆಸ್ಟಿಕ್) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತವಾಗಲಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು(BMRCL) ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.
ಈ ಕಾಮಗಾರಿಯನ್ನು ನೆರವೇರಿಸಲು ನೇರಳೆ ಮಾರ್ಗದಲ್ಲಿ ಬೆಳಿಗೆ, 07:00 ರಿಂದ 09:00 ಗಂಟೆಯವರೆಗೆ ನಾಡಪ್ರಭು ಕೆಂಪೇಗೌಡ ನಿಲ್ಯಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.
https://www.newsics.com/2026/04/02/thalapathy-vijay-files-nomination-from-trichy-east-constituency/