Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಣಕಾಸಿನ ವಿಚಾರಕ್ಕೆ ಹೆಂಡತಿಯನ್ನೇ ಉಸಿರುಗಟ್ಟಿಸಿ ಕೊಂದ ಕಾಂಟ್ರಾಕ್ಟರ್ ದರಿಯಪ್ಪ
ಕರ್ನಾಟಕಪ್ರಮುಖ

ಹಣಕಾಸಿನ ವಿಚಾರಕ್ಕೆ ಹೆಂಡತಿಯನ್ನೇ ಉಸಿರುಗಟ್ಟಿಸಿ ಕೊಂದ ಕಾಂಟ್ರಾಕ್ಟರ್ ದರಿಯಪ್ಪ

Share
1 Min Read
SHARE

newsics.com

ಬೆಂಗಳೂರು : ಹಣಕಾಸಿನ ವಿಚಾರಕ್ಕೆ ತನ್ನ ಹೆಂಡತಿ ಕುತ್ತಿಗೆ ಕಾಲಿಟ್ಟು ತುಳಿದು ಉಸಿರುಗಟ್ಟಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಸಂದ್ರದಲ್ಲಿ ನಡೆದಿದೆ.

ಮೃತಳನ್ನು ಕಾವ್ಯ (34) ಎಂದು ಗುರುತಿಸಲಾಗಿದೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ ದರಿಯಪ್ಪ ಮತ್ತು ಕಾವ್ಯ (34) ದಂಪತಿಗಳು ನಾಗಸಂದ್ರದಲ್ಲಿ ವಾಸವಾಗಿದ್ದರು. ದರಿಯಪ್ಪ ನಗರದಲ್ಲಿ ಕಾಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿದ್ದನು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಆದರೆ, ಕಳೆದ ಒಂದು ವಾರದಿಂದ ಇವರ ನಡುವೆ ಹಣಕಾಸಿನ ವಿಚಾರವಾಗಿ ತೀವ್ರ ಗಲಾಟೆ ನಡೆಯುತ್ತಿತ್ತು. ಇತ್ತೀಚೆಗಷ್ಟೇ ದರಿಯಪ್ಪ ಮನೆಗೆ 2 ಲಕ್ಷ ರೂಪಾಯಿ ಹಣವನ್ನು ತಂದಿಟ್ಟಿದ್ದನು. ಈ ಹಣವನ್ನು ತನ್ನ ಅಣ್ಣನಿಗೆ ನೀಡಬೇಕೆಂದು ಕಾವ್ಯ ಪಟ್ಟು ಹಿಡಿದಿದ್ದರು. ಇದೇ ವಿಷಯವಾಗಿ ಇಂದು ಮಧ್ಯಾಹ್ನ 12:30ರ ಸುಮಾರಿಗೆ ದಂಪತಿ ನಡುವೆ ದೊಡ್ಡ ಜಗಳ ನಡೆದಿದೆ.

ಸಿಟ್ಟಿಗೆದ್ದ ದರಿಯಪ್ಪ, ಪತ್ನಿ ಕಾವ್ಯ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಅಷ್ಟಕ್ಕೇ ನಿಲ್ಲದ ಈತ, ಕಾವ್ಯ ಕೆಳಗೆ ಬಿದ್ದಾಗ ಆಕೆಯ ಕುತ್ತಿಗೆಯ ಮೇಲೆ ಕಾಲಿಟ್ಟು ಜೋರಾಗಿ ತುಳಿದಿದ್ದಾನೆ. ಉಸಿರುಗಟ್ಟಿ ಕಾವ್ಯ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಆರಂಭದಲ್ಲಿ ಇದು ಕೇವಲ ಹಣದ ವಿಚಾರಕ್ಕೆ ನಡೆದ ಕೊಲೆ ಎಂದು ಭಾವಿಸಲಾಗಿತ್ತು. ಆದರೆ ದರಿಯಪ್ಪನ ಸ್ನೇಹಿತ ವೆಂಕಟಾಚಲಯ್ಯ ನೀಡಿರುವ ಹೇಳಿಕೆ ಪ್ರಕರಣಕ್ಕೆ ಬೆಚ್ಚಿಬೀಳಿಸುವ ಟ್ವಿಸ್ಟ್ ನೀಡಿದೆ. ದರಿಯಪ್ಪನಿಗೆ ವಿಪರೀತ ‘ಹೆಣ್ಣುಮಕ್ಕಳ ಶೋಕಿ’ ಇತ್ತು ಎಂದು ವೆಂಕಟಾಚಲಯ್ಯ ಬಯಲು ಮಾಡಿದ್ದಾರೆ.

ಸದ್ಯ ಪೀಣ್ಯಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ದರಿಯಪ್ಪನನ್ನು ವಶಕ್ಕೆ ಪಡೆದಿದ್ದಾರೆ.

https://www.newsics.com/2026/04/03/the-white-bolero-that-caused-fear-girls-are-their-target/

 

TAGGED:Contractor Dariappa strangled his wife to death over financial issues
Share This Article
Facebook Twitter Copy Link Print
Previous Article ಭಯ ಮೂಡಿಸಿದ ಬಿಳಿ ಬೊಲೆರೋ : ಹೆಣ್ಣು ಮಕ್ಕಳೇ ಇವರ ಟಾರ್ಗೆಟ್​
Next Article ವಿಮಾನ ಪ್ರಯಾಣಿಕರಿಗೆ ಶಾಕ್: ಉಚಿತ ಸೀಟು ಹಂಚಿಕೆಯ ಆದೇಶ ವಾಪಸ್ ಪಡೆದ ಕೇಂದ್ರ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?