newsics.com
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ (ಪರೀಕ್ಷೆ-1) ಫಲಿತಾಂಶವು ಇದೇ ಏಪ್ರಿಲ್ 7, 2026 ರಂದು ಪ್ರಕಟವಾಗುವ ಸಾಧ್ಯತೆಯಿದೆ.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಶಿಕ್ಷಣ ಇಲಾಖೆ ಪ್ರಕಟಿಸಿರುವ ಸಂಭಾವ್ಯ ದಿನಾಂಕ ಏ. 7ಕ್ಕೆ ಫಲಿತಾಂಶ ಹೊರಬರುವ ಸಾಧ್ಯತೆ ಇದೆ. ಫೆ. 28ರಿಂದ ಮಾ. 17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ಈ ಬಾರಿ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದು, ಮಾ. 20ರಿಂದ ಮೌಲ್ಯಮಾಪನ ಆರಂಭವಾಗಿತ್ತು. ಅದೇ ರೀತಿ ಏಪ್ರಿಲ್ 24ಕ್ಕೆ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.
ದ್ವಿತೀಯ ಪಿಯುಸಿ (ಪರೀಕ್ಷೆಯ ಫಲಿತಾಂಶವು ಏಪ್ರಿಲ್ 7, 2026 ರಂದು ಪ್ರಕಟವಾಗುವ ಸಾಧ್ಯತೆಯಿದೆ
ಫಲಿತಾಂಶ ವೀಕ್ಷಣೆ: ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಆದ karresults.nic.in ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
SSLC ಫಲಿತಾಂಶ : ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 24, 2026 ರಂದು ಪ್ರಕಟವಾಗುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.
https://www.newsics.com/2026/04/03/newlywed-breaks-down-in-tears-after-seeing-her-pet-dogs-love/