newsics.com
ಮಡಿಕೇರಿ: ಚಾರಣಕ್ಕೆ ತೆರಳಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ.
ನಾಪೋಕ್ಲು ಸಮೀಪದ ಯವಕಪಾಡಿ ಗ್ರಾಮದ ಹೋಂಸ್ಟೇಯಲ್ಲಿ ತಂಗಿದ್ದ ಶರಣ್ಯ (36) ಎಂಬ ಯುವತಿ ಗುರುವಾರ ಕೊಡಗಿನ ಅತ್ಯಂತ ಎತ್ತರದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದು, ಅಲ್ಲಿಂದ ವಾಪಸಾಗಿಲ್ಲ ಎಂದು ಹೇಳಲಾಗಿದೆ.
ಆನ್ಲೈನ್ನಲ್ಲಿ ಬುಕ್ಕಿಂಗ್ ಮಾಡಿ ಒಬ್ಬಳೇ ಬಂದಿದ್ದ ಈ ಯುವತಿಯನ್ನು, ಆ ವ್ಯಾಪ್ತಿಯಲ್ಲಿ ಕಾಡಾನೆ ಇರುವ ಹಿನ್ನೆಲೆಯಲ್ಲಿ ಬೇರೆ ಪ್ರವಾಸಿಗರ ಜತೆಯಲ್ಲಿ ಚಾರಣಕ್ಕೆ ಕಳುಹಿಸಲಾಗಿತ್ತೆನ್ನಲಾಗಿದೆ. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ ಕಾರಣ ಸ್ಥಳೀಯರು ಅರಣ್ಯ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ.
ಈ ಬಗ್ಗೆ ಅಲ್ಲಿಯ ಸ್ಥಳೀಯ ನಿವಾಸಿ ಕುಡಿಯರ ಮುತ್ತಪ್ಪ ಎಂಬುವರು ನಾಪೋಕ್ಲು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಅರಣ್ಯ ಇಲಾಖೆಯವರು, ಪೊಲೀಸರು ಹಾಗೂ ಗ್ರಾಮಸ್ಥರು ಬೆಟ್ಟದಲ್ಲೆಲ್ಲಾ ಹುಡುಕಾಡಿದರೂ ಯುವತಿಯ ಸುಳಿವು ದೊರೆತಿಲ್ಲ ಎನ್ನಲಾಗಿದೆ.
ಆಕೆಯ ಮೊಬೈಲ್ ಮಲೆಯಾಳಂ ನೆಟ್ವರ್ಕ್ನಲ್ಲಿರುವುದಾಗಿ ತಿಳಿದುಬಂದಿದ್ದು, ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಅಲ್ಲಿಯೇ ಬೀಡುಬಿಟ್ಟಿದ್ದು, ಶುಕ್ರವಾರ ಮತ್ತೆ ಶೋಧ ಕಾರ್ಯ ಮುಂದುವರಿದಿದೆ.
40 ಲಕ್ಷ ಭಾರತೀಯರಿಂದ ವಿವಾಹೇತರ ಡೇಟಿಂಗ್ ಆ್ಯಪ್ ಬಳಕೆ : ಬೆಂಗಳೂರಿಗೆ ಅಗ್ರಸ್ಥಾನ