newsics.com
ಕರ್ನಾಟಕದಲ್ಲಿ ಬೇಸಿಗೆ ಅವಧಿಯಲ್ಲೇ ಮಳೆಯ ಅಬ್ಬರ ಮುಂದುವರಿದಿದ್ದು, ಇಂದು ಸಹ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರದಲ್ಲಿ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ವೇಳೆಗೆ ಕೆಲವೆಡೆ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ವಿಜಯನಗರ, ದಾವಣಗೆರೆ, ಬಳ್ಳಾರಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.