https://youtube.com/shorts/T_aMW9fkptU?si=5dNoX3esn0X-svY6
newsics.com
ಹುಬ್ಬಳ್ಳಿ: ಜಿಮ್ ಟ್ರೈನರ್ ಸಮೀರ್ ಮುಲ್ಲಾ ಲವ್ ಜಿಹಾದ್ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿರುವಾಗಲೇ ಅಂತಹದ್ದೇ ಮತ್ತೊಂದು ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮುಫೀಸ್ ಮಿಯಾನ್ನವರ್ ಎಂಬಾತ ಹಿಂದೂ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯವೆಸಗಿದ್ದ ಮುಫೀಸ್ ಮಿಯಾನ್ನವರ್ ಬಳಿಕ ಯುವತಿಯನ್ನು ಧಾರವಾಡದಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಲು ಸಿದ್ಧತೆ ನಡೆಸಿದ್ದ.
ಕಳೆದ ಆಗಸ್ಟ್ ನಲ್ಲಿ ಮದುವೆಯಾಗಲು ನೋಂದಣಿಗೆ ಸಿದ್ಧತೆ ನಡೆಸಿದ್ದ. ವಿಷಯ ತಿಳಿದ ಯುವತಿಯ ಪೋಷಕರು ಮದುವೆಯನ್ನು ನಿಲ್ಲಿಸಿದ್ದರು. ಇದಾದ ಬಳಿಕವೂ ಮುಫೀಸ್ ಮಿಯಾನ್ನವರ್ ಮತ್ತೆ ಬ್ಲ್ಯಾಕ್ ಮೇಲ್ ಮಾಡತೊಡಗಿದ್ದ. ನಿನ್ನ ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ.
ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮನೆಗೆ ನುಗ್ಗಿದ್ದ ಮಿಫೀಸ್, ಮತ್ತೆ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಯಾರಿಗಾದರೂ ವಿಷಯ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಜಿಮ್ ಟ್ರೇನರ್ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂತ್ರಸ್ತ ಯುವತಿ ಹಿಂದೂ ಸಂಘಟನೆಗಳ ನೆರವಿನಿಂದ ಪೊಲಿಸರಿಗೆ ದೂರು ನೀಡಿದ್ದಾಳೆ.
ಕೇಶ್ವಾಪುರ ಠಾಣೆಯಲ್ಲಿ ಮುಫೀಸ್ ಮಿಯಾನ್ನವರ್ ವಿರುದ್ಧ ಅತ್ಯಾಚಾರ ಪ್ರಕರಣ, ಬ್ಲ್ಯಾಕ್ ಮೇಲ್ ಸೇರಿದಂತೆ ಹಲವು ಪ್ರಕರಣದಡಿ ಎಫ್ಐಆರ್ ದಾಖಲಾಗಿದೆ.
https://www.newsics.com/2026/04/05/us-airman-finally-safely-leaves-iran/