Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡ್ರಿಂಕ್ & ಡ್ರೈವ್‌ ಚೆಕಪ್‌ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!
ಕರ್ನಾಟಕಪ್ರಮುಖ

ಡ್ರಿಂಕ್ & ಡ್ರೈವ್‌ ಚೆಕಪ್‌ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!

Share
2 Min Read
SHARE

ಲಾರಿ ಚಾಲಕನೊಬ್ಬ ಪೊಲೀಸ್ ಠಾಣೆಗೆ ಎಳೆದೊಯ್ದ ಲಾರಿಯಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಜೆಪಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ.

ಏನಿದು ಘಟನೆ?

ಮೃತ ಚಾಲಕನನ್ನು ಷಣ್ಮುಗ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಜೆಪಿ ನಗರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ತಪಾಸಣೆ (Drink and Drive Checking) ನಡೆಸುತ್ತಿದ್ದರು. ಈ ವೇಳೆ ಲಾರಿ ಚಾಲಕ ಷಣ್ಮುಗ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಕೂಡಲೇ ಆತನನ್ನು ತಡೆದ ಪೊಲೀಸರು ಬ್ರೀತ್ ಅನಲೈಸರ್ ಮೂಲಕ ತಪಾಸಣೆ ನಡೆಸಿದಾಗ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ. ಇದಾದ ನಂತರ ಪೊಲೀಸರು ನಿಯಮದಂತೆ ಷಣ್ಮುಗನಿಗೆ ಭಾರೀ ಮೊತ್ತದ ದಂಡ (Fine) ವಿಧಿಸಿದ್ದಾರೆ. ಅಲ್ಲದೆ, ಮದ್ಯದ ಅಮಲಿನಲ್ಲಿದ್ದ ಚಾಲಕನಿಗೆ ವಾಹನ ಚಲಾಯಿಸಲು ಬಿಡದ ಪೊಲೀಸರು, ಲಾರಿಯನ್ನು ವಶಕ್ಕೆ ಪಡೆದು ಜೆಪಿ ನಗರ ಪೊಲೀಸ್ ಠಾಣೆಯ ಸಮೀಪವೇ ತಂದು ನಿಲ್ಲಿಸಿದ್ದರು.

ಪೊಲೀಸರು ಲಾರಿಯನ್ನು ಠಾಣೆಯ ಹತ್ತಿರ ನಿಲ್ಲಿಸಿ ಹೋದ ನಂತರ, ಚಾಲಕ ಷಣ್ಮುಗ ತೀವ್ರ ಮಾನಸಿಕ ಅಸಮಾಧಾನಕ್ಕೆ ಒಳಗಾಗಿದ್ದ ಎನ್ನಲಾಗಿದೆ. ಮದ್ಯಪಾನದ ಅಮಲು ಹಾಗೂ ಪೊಲೀಸರು ದಂಡ ಹಾಕಿದ ವಿಚಾರದಿಂದ ನೊಂದ ಆತ, ತಡರಾತ್ರಿ ಲಾರಿಯಲ್ಲಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. ಇಂದು ಬೆಳಿಗ್ಗೆ ಈ ವಿಷಯ ಬೆಳಕಿಗೆ ಬಂದಿದ್ದು, ಲಾರಿಯೊಳಗೆ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಜೆಪಿ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರು ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಮದ್ಯಪಾನ ಮಾಡಿದ್ದರಿಂದ ಉಂಟಾದ ಭಯ ಅಥವಾ ದಂಡ ಪಾವತಿಸಲು ಹಣವಿಲ್ಲದ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಈಗಾಗಲೇ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ‘ಚಾಲಕ ಷಣ್ಮುಗ ಮದ್ಯಪಾನ ಮಾಡಿದ್ದ ಎನ್ನುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ನಿಯಮದಂತೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಆತ ಈ ರೀತಿ ಆತ್ಮ*ಹತ್ಯೆ ಮಾಡಿಕೊಳ್ಳುತ್ತಾನೆ ಎಂದು ನಿರೀಕ್ಷಿಸಿರಲಿಲ್ಲ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share This Article
Facebook Twitter Copy Link Print
Previous Article ಚಿನ್ನ – ಬೆಳ್ಳಿ ಪ್ರಿಯರಿಗೆ ಗುಡ್‌ನ್ಯೂಸ್
Next Article ಸ್ಟೇಟಸ್‌ಗಾಗಿ ಹೊಸ ಕಾರ್ ತಗೋತಿದ್ದೀರಾ? ಈ 5 ತಪ್ಪುಗಳನ್ನು ಮಾತ್ರ ಮಾಡ್ಬೇಡಿ!

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?