Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kerala techie found ಮಡಿಕೇರಿ ಕಾಡಲ್ಲಿ ಕಾಣೆಯಾಗಿದ್ದ ಕೇರಳ ಟೆಕ್ಕಿ ಶರಣ್ಯ ಪತ್ತೆ, ದಾರಿ ತಿಳಿಯದೆ ಕಂಗಾಲು
ಕರ್ನಾಟಕದೇಶಪ್ರಮುಖ

Kerala techie found ಮಡಿಕೇರಿ ಕಾಡಲ್ಲಿ ಕಾಣೆಯಾಗಿದ್ದ ಕೇರಳ ಟೆಕ್ಕಿ ಶರಣ್ಯ ಪತ್ತೆ, ದಾರಿ ತಿಳಿಯದೆ ಕಂಗಾಲು

Share
2 Min Read
SHARE

 

newsics.com

ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ (Sharanya) ಕೊ‌ನೆಗೂ ಪತ್ತೆ ಆಗಿದ್ದಾರೆ.

ಈ ಮೂಲಕ ನಾಲ್ಕು ದಿನಗಳ‌ ಕಾರ್ಯಾಚರಣೆ ಯಶಸ್ವಿ ಆಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರುಬಿಟ್ಟಿದ್ದಾರೆ.

ರಸ್ತೆ ಅರಿವಾಗದೆ ಪಾಳು ಬಿದ್ದ ಬಂಗಲೆಯೊಂದರಲ್ಲೇ ಶರಣ್ಯ ಉಳಿದುಕೊಂಡಿದ್ದರು. ಸ್ಥಳೀಯ ಜನಾಂಗದವರ ಸಹಾಯ ಬೆನ್ನಲ್ಲೇ ಇದೀಗ ಯುವತಿ ಪತ್ತೆ ಆಗಿದ್ದಾರೆ.

ಕೇರಳದಿಂದ ಕೊಡಗು ಜಿಲ್ಲೆಗೆ ಚಾರಣಕ್ಕಾಗಿ ಬಂದು ಗುರುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಯುವತಿ ಶರಣ್ಯ ಇದೀಗ ಕೊನೆಗೂ ಪತ್ತೆಯಾಗಿದ್ದಾರೆ. ಸದ್ಯ ಯುವತಿಯನ್ನು ಸುರಕ್ಷಿತವಾಗಿ ಕರೆತರಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ದಾರಿ ತಪ್ಪಿ ಕಾಡಿನಲ್ಲಿ ಕಳೆದುಹೋಗಿದ್ದ ಶರಣ್ಯಗಾಗಿ ಬುಡಕಟ್ಟು ಜನಾಂಗದ ಜತೆ ಅರಣ್ಯ ಸಿಬ್ಬಂದಿ 4 ದಿನದಿಂದ ನಿರಂತರ ಹುಡುಕಾಟ ನಡೆಸಿದ್ದರು.
ಯುವತಿ ಶರಣ್ಯ ಕಾಡಿನಲ್ಲಿ ನಡೆದು ನಡೆದು ಪಾಳುಬಿದ್ದ ಬಂಗಲೆ ಸೇರಿದ್ದರು. ರಸ್ತೆ ಅರಿವಾಗದೆ ಅಲ್ಲೇ ಉಳಿದಿದ್ದರು. ಏಪ್ರಿಲ್ 2ರಿಂದ ಕಾಡಿನಲ್ಲಿ ಅಲೆದು ನಿತ್ರಾಣಗೊಂಡಿದ್ದ ಶರಣ್ಯರನ್ನು ಸದ್ಯ ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ.

35 ವರ್ಷದ ಶರಣ್ಯ ಕೇರಳದ ಕೋಯಿಕ್ಕೋಡ್ ನಿವಾಸಿ. ಎರ್ನಾಕುಲಂನಲ್ಲಿ ಐಟಿ ಉದ್ಯೋಗಿ. ಗುರುವಾರ ಬೆಳಗ್ಗೆ ಕಕ್ಕಬ್ಬೆ ಗ್ರಾಮದ ಹೋಂಸ್ಟೇಯೊಂದಕ್ಕೆ ಆಗಮಿಸಿದ್ದ ಈಕೆ ಬೆಳಗ್ಗೆ 8.30ರ ಸುಮಾರಿಗೆ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಹೋಗುವ ಅರಣ್ಯ ಇಲಾಖೆಯ ಚೆಕ್​ಪೋಸ್ಟ್​ಗೆ ಆಗಮಿಸಿದ್ದಾಳೆ. ಆದರೆ ಒಬ್ಬೊಬ್ಬರನ್ನೇ ಟ್ರೆಕ್ಕಿಂಗ್ ಬಿಡುವುದಿಲ್ಲವಾದ್ರಿಂದ ಬೇರೊಂದು ಗ್ರೂಪ್ ಬಂದ ಬಳಿಕ ಅವರ ಜೊತೆ ಈಕೆಯನ್ನ ಕಳುಹಿಸಲಾಗಿತ್ತು.

ಮಧ್ಯಾಹ್ನ 1.30ರ ಸುಮಾರಿಗೆ ಈಕೆ ಇದೇ ಚೆಕ್​ ಪೋಸ್ಟ್​ ಬಳಿಗೆ ಹಿಂದಿರುಗಬೇಕಿತ್ತು. ಈಕೆಯನ್ನ ಕರೆತರಲೆಂದು ಹೋಮಸ್ಟೇ ಮಾಲಿಕ ನಂದ ತಮ್ಮ ಸ್ಕೂಟಿಯಲ್ಲಿ ಇಲ್ಲಿಗೆ ಬಂದು ಕರೆ ಮಾಡಿದಾಗ ನಾಟ್ ರೀಚೇಬಲ್ ಬಂದಿದೆ.

ಮತ್ತೆರಡು ಬಾರಿ ಪ್ರಯತ್ನಿಸಿದಾಗ ಕರೆ ಸ್ವೀಕರಿಸಿದ ಆಕೆ ತಾನು ದಾರಿ ತಪ್ಪಿದ್ದೇನೆ ಎಂದು ಹೇಳಿದ್ದಳು. ಸಿಬ್ಬಂದಿ ಕಾರ್ಯಾಚರಣೇ ನಡೆಸಿದರೂ ಸುಳಿವೇ ಸಿಕ್ಕಿರಲಿಲ್ಲ.

ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ 40ಕ್ಕೂ ಅಧಿಕ ಸಿಬ್ಬಂದಿ, ಸ್ಥಳೀಯರು ಸೇರಿ ಮತ್ತೆ ಕಾರ್ಯಾಚರಣೆ ಮಾಡಿದ್ದರು. ಶ್ವಾನ ದಳವನ್ನೂ ಕರೆಸಿ ಬೆಟ್ಟದ ಮೇಲೆ ಆಕೆ ಎಲ್ಲಿ ಮಿಸ್ ಆಗಿದಳೋ ಅಲ್ಲೆಲ್ಲಾ ಹುಡುಕಾಟ ನಡೆಸಿದರೂ ಸುಳಿವೇ ಇರಲಿಲ್ಲ. ಶರಣ್ಯ ಸುರಕ್ಷಿತವಾಗಿ‌ ಮರಳಿ ಬರಲೆಂದು ಬೆಟ್ಟ ಪ್ರದೇಶದಲ್ಲಿ ವಾಸಿಸುವ ಕುಡಿಯ ಜನಾಂಗ ಮಲೆ‌ ತಮ್ಮಚ್ಚ ದೇವರಿಗೆ ಹರಕೆ ಕೂಡ ಹೊತ್ತಿದ್ದರು. ಇದೀಗ ನಿರಂತರ ಶೋಧ ಬೆನ್ನಲ್ಲೇ ಯುವತಿ ಪತ್ತೆ ಆಗಿದ್ದಾರೆ.

ಡ್ರಿಂಕ್ & ಡ್ರೈವ್‌ ಚೆಕಪ್‌ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!

 

ಸ್ಟೇಟಸ್‌ಗಾಗಿ ಹೊಸ ಕಾರ್ ತಗೋತಿದ್ದೀರಾ? ಈ 5 ತಪ್ಪುಗಳನ್ನು ಮಾತ್ರ ಮಾಡ್ಬೇಡಿ!

ಡೊನಾಲ್ಡ್ ಟ್ರಂಪ್ ಸತ್ತರಾ? ಇದು ನಿಜವಾ?

TAGGED:distraughtfoundKerala techie Sharanyalost her waywho went missing in Madikeri forest
Share This Article
Facebook Twitter Copy Link Print
Previous Article Alcohol more expensive ವಾರ್ ಎಫೆಕ್ಟ್: ಮದ್ಯ ಮತ್ತಷ್ಟು ದುಬಾರಿ ಸಾಧ್ಯತೆ
Next Article ಸತತ 14 ದಿನಗಳ ಕಾಲ ದಿನವೂ ಮೊಟ್ಟೆ ತಿಂದರೆ ಏನಾಗುತ್ತದೆ?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?