https://youtube.com/shorts/T_aMW9fkptU?si=5dNoX3esn0X-svY6
newsics.com
ಕೊಡಗು: ಅತಿ ಎತ್ತರದ ಬೆಟ್ಟವಾಗಿರುವ ತಡಿಯಾಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ಗೆ ತೆರಳಿ ಹೋಗಿ ಕಣ್ಮರೆಯಾಗಿದ್ದ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಕಳೆದ ಏಪ್ರಿಲ್ 2ರ ಮಧ್ಯಾಹ್ನ ಕಣ್ಮರೆಯಾಗಿದ್ದ ಕೇರಳ ಮೂಲದ ಟೆಕ್ಕಿ ಶರಣ್ಯರನ್ನು ಪತ್ತೆ ಹಚ್ಚಲು ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ. ಕಾಡಿನಲ್ಲಿ ಒಬ್ಬಂಟಿಯಾಗಿ ಚಾರಣಕ್ಕೆ ತೆರಳಿದ್ದ ಶರಣ್ಯ ಪತ್ತೆಯಾಗುತ್ತಿದ್ದಂತೆ ಆತಂಕಗೊಂಡಿದ್ದ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಕಾಡಿನಿಂದ ಹೊರಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶರಣ್ಯ, ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ. ‘ನಾನು ಆರೋಗ್ಯವಾಗಿದ್ದೇನೆ. ಕಾಡಿನಲ್ಲಿ ದಾರಿ ತಪ್ಪಿದಾಗ ನನ್ನ ಸ್ನೇಹಿತರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ಆದರೆ ಫೋನ್ ಸ್ವಿಚ್ ಆಫ್ ಆಗಿತ್ತು. ನನ್ನ ಬಳಿ ಇದ್ದಿದ್ದು ಕೇವಲ ಒಂದು ಬಾಟಲಿ ನೀರು ಮಾತ್ರ. ರಕ್ಷಣಾ ತಂಡವು ನನ್ನನ್ನು ಹುಡುಕಲು ಡ್ರೋಣ್ ಬಳಸಬಹುದು ಎಂದು ನನಗೆ ತಿಳಿದಿತ್ತು. ಹಾಗಾಗಿ ಡ್ರೋಣ್‌ಗೆ ಕಾಣಿಸುವಂತಹ ಬಯಲು ಜಾಗದಲ್ಲೇ ನಾನು ಹೆಚ್ಚಾಗಿ ನಿಂತಿದ್ದೆ’ ಎಂದು ಅವರು ವಿವರಿಸಿದ್ದಾರೆ. ಅವರ ಈ ಸಮಯಪ್ರಜ್ಞೆಯೇ ಅವರ ಪ್ರಾಣ ಉಳಿಸಿದೆ ಎನ್ನಬಹುದು.
ಶರಣ್ಯ ನಾಪತ್ತೆಯಾದ ದಿನದಿಂದಲೂ ಕೊಡಗು ಜಿಲ್ಲಾ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ, ಎಎನ್‌ಎಫ್ (ನಕ್ಸಲ್ ನಿಗ್ರಹ ಪಡೆ) ಮತ್ತು ಸ್ಥಳೀಯ ನಿವಾಸಿಗಳು ಹಗಲಿರುಳು ಶೋಧ ನಡೆಸಿದ್ದರು. ಡ್ರೋಣ್, ಥರ್ಮಲ್ ಡ್ರೋಣ್ ಮತ್ತು ಶ್ವಾನ ದಳವನ್ನು ಬಳಸಲಾಗಿತ್ತು. ಕೊನೆಗೆ ಸ್ಥಳೀಯ ನಿವಾಸಿಗಳು ಕಾಡಿನ ಒಂದು ಭಾಗದಲ್ಲಿ ವಿಚಿತ್ರ ಶಬ್ದ ಕೇಳಿ ಅಲ್ಲಿಗೆ ಹೋಗಿ ನೋಡಿದಾಗ ಶರಣ್ಯ ಪತ್ತೆಯಾಗಿದ್ದಾರೆ. “ನಾವು ಶಬ್ದ ಕೇಳಿದ ಜಾಗಕ್ಕೆ ಹೋದಾಗ ಶರಣ್ಯ ಅಲ್ಲಿ ಕುಳಿತಿದ್ದರು,” ಎಂದು ಅವರನ್ನು ಪತ್ತೆ ಮಾಡಿದ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.
https://www.newsics.com/2026/04/06/gunshots-heard-near-the-white-house/