Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊಸ ಕಾರು ಕೊಡಿಸುತ್ತೇನೆ ಎಂಬ ಆಮಿಷವೊಡ್ಡಿ ಅಕ್ಕನ ಗಂಡನನ್ನ ಬರ್ಬರವಾಗಿ ಹತ್ಯೆ ಮಾಡಿದ ಬಾಮೈದ
ಕರ್ನಾಟಕಪ್ರಮುಖ

ಹೊಸ ಕಾರು ಕೊಡಿಸುತ್ತೇನೆ ಎಂಬ ಆಮಿಷವೊಡ್ಡಿ ಅಕ್ಕನ ಗಂಡನನ್ನ ಬರ್ಬರವಾಗಿ ಹತ್ಯೆ ಮಾಡಿದ ಬಾಮೈದ

Share
2 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಬೆಂಗಳೂರು : ‘ಹೊಸ ಕಾರು ಕೊಡಿಸುತ್ತೇನೆ ಬಾ’ ಎಂದು ನಂಬಿಸಿ ಆಂಧ್ರಪ್ರದೇಶಕ್ಕೆ ಕರೆಸಿಕೊಂಡ ತನ್ನ ಸ್ವಂತ ಅಕ್ಕನ ಗಂಡನನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ವಿನಯ್ ಕುಮಾರ್ (30) ಕೊಲೆಯಾದ ದುರ್ದೈವಿ ಆಗಿದ್ದಾರೆ.ಬೆಂಗಳೂರಿನ ಚಿಕ್ಕಬಾಣವಾರದಲ್ಲಿ ವಾಸವಾಗಿದ್ದ ವಿನಯ್ ಕುಮಾರ್ ಅವರು ಸ್ವಂತದ ಖಾಸಗಿ ಕಂಪನಿಯೊಂದನ್ನು ನಡೆಸುತ್ತಿದ್ದರು. ಕಳೆದ 11 ತಿಂಗಳ ಹಿಂದೆಯಷ್ಟೇ ಮೇಘನಾ ಎಂಬುವವರ ಜೊತೆ ಮನೆಯವರ ಸಮ್ಮತಿಯ ಮೇರೆಗೆ ಅದ್ದೂರಿಯಾಗಿ ಮದುವೆಯಾಗಿದ್ದರು.

ದಂಪತಿಗಳ ನಡುವೆ ಈ ಹಿಂದೆ ಸಣ್ಣಪುಟ್ಟ ವಿಚಾರಕ್ಕೆ ಪತ್ನಿಯ ಅಣ್ಣ ರಾಜು ಎಂಬುವವರ ಜೊತೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ವಿನಯ್ ಪತ್ನಿಯ ಅಣ್ಣನಿಗೆ (ಭಾಮೈದನಿಗೆ) ಬೈದಿದ್ದರು ಎನ್ನಲಾಗಿದ್ದು, ಇದನ್ನೇ ಮನಸ್ಸಿನಲ್ಲಿಟ್ಟುಕೊಂಡ ರಾಜು ಸೇಡು ತೀರಿಸಿಕೊಳ್ಳಲು ಹೊಂಚು ಹಾಕಿದ್ದನು.

ವಿನಯ್ ಕುಮಾರ್ ಅವರು ಹೊಸ ಕಾರು ಖರೀದಿಸಲು ಮುಂದಾಗಿದ್ದರು. ಈ ವೇಳೆ ಪತ್ನಿ ಮೇಘನಾ, ‘ನಮ್ಮ ಅಣ್ಣ ಕಾರು ತೆಗೆದುಕೊಳ್ಳಲು ಹಣ ಕೊಡುತ್ತಾನೆ, ಆತನ ಬಳಿ ಹೋಗಿ ಹಣ ಪಡೆದು ಕಾರು ತನ್ನಿ’ ಎಂದು ವಿನಯ್‌ಗೆ ನಂಬಿಸಿ ಕಳುಹಿಸಿದ್ದಾಳೆ. ಪತ್ನಿಯ ಮಾತನ್ನು ನಂಬಿದ ವಿನಯ್, ತನ್ನ ಸ್ನೇಹಿತನ ‘ಹಿಮಾಲಯನ್’ ಬೈಕ್ ಪಡೆದುಕೊಂಡು ಆಂಧ್ರಪ್ರದೇಶದ ಲೇಪಾಕ್ಷಿಗೆ ತೆರಳಿದ್ದರು.

ವಿನಯ್ ಲೇಪಾಕ್ಷಿಗೆ ತೆರಳಿ 2 ದಿನಗಳಾದರೂ ಮನೆಗೆ ವಾಪಸ್ ಬಂದಿರಲಿಲ್ಲ, ಅತ್ತ ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಲೇಪಾಕ್ಷಿಗೆ ತೆರಳಿ ಹುಡುಕಾಟ ಆರಂಭಿಸಿದರು. ಅದೃಷ್ಟವಶಾತ್ ವಿನಯ್ ತೆಗೆದುಕೊಂಡು ಹೋಗಿದ್ದ ಹಿಮಾಲಯನ್ ಬೈಕ್‌ಗೆ ಜಿಪಿಎಸ್ ಅಳವಡಿಸಲಾಗಿತ್ತು. ಅದರ ಆಧಾರದ ಮೇಲೆ ಹುಡುಕಾಟ ನಡೆಸಿದಾಗ ಬೈಕ್ ಪತ್ತೆಯಾಗಿದೆ. ಬೈಕ್ ಬಿದ್ದಿದ್ದ ಜಾಗದಿಂದ ಸುಮಾರು 100 ಮೀಟರ್ ಅಂತರದಲ್ಲಿ ವಿನಯ್ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆರೋಪಿ ರಾಜು ತನ್ನ ಬಾವ ವಿನಯ್ ಮೇಲೆ ಬ್ಯಾಟ್ ಮತ್ತು ಕಬ್ಬಿಣದ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಲೇಪಾಕ್ಷಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಈಗ ಆರೋಪಿ ರಾಜುನನ್ನು ವಶಕ್ಕೆ ಪಡೆದಿದ್ದಾರೆ.

https://www.newsics.com/2026/04/07/what-did-the-high-court-say-to-the-young-woman-who-said-she-was-19-and-her-husband-was-40-and-she-couldnt-live-with-him/

TAGGED:A man brutally murdered his sister's husband on the pretext of giving him a new car.
Share This Article
Facebook Twitter Copy Link Print
Previous Article ನನಗೀಗ 19, ಪತಿಗೆ 40 ವರ್ಷ, ಆತನ ಜತೆ ಬದುಕಲಾರೆ ಎಂದ ಯುವತಿಗೆ ಹೈಕೋರ್ಟ್ ಹೇಳಿದ್ದೇನು?
Next Article ಬೆಂಗಳೂರಿನ ಟ್ರಾಫಿಕ್ ನಿಮಗೆ ತಾಳ್ಮೆಯನ್ನು ಕಲಿಸುತ್ತದೆ :ಅಷ್ಟಕ್ಕೂ ಹೈಕೋರ್ಟ್ ಹೀಗೆ ಹೇಳಿದ್ದೇಕೆ?

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?