newsics.com
ಇಂಫಾಲ: ಮಣಿಪುರದ ಬಿಷ್ಣುಪುರ ಜಿಲ್ಲೆಯ ಮೋಯಿರಾಂಗ್ ಟ್ರೊಂಗ್ಲಾವೊಬಿ ಪ್ರದೇಶದ ಮನೆಯೊಂದರ ಮೇಲೆ ಶಂಕಿತ ಉಗ್ರರು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ 5 ವರ್ಷದ ಬಾಲಕ, ಆರು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ.
ಘಟನೆಯನ್ನು ಖಂಡಿಸಿ ಸ್ಥಳೀಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಪೆಟ್ರೋಲ್ ಬಂಕ್ ಬಳಿಯಿದ್ದ ಒಂದು ಟ್ರಕ್, ಎರಡು ತೈಲ ಟ್ಯಾಂಕರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಮೋಯಿರಾಂಗ್ ಪೊಲೀಸ್ ಠಾಣೆಯ ಮುಂದೆ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಪೊಲೀಸ್ ಚೌಕಿಯನ್ನು ಧ್ವಂಸಗೊಳಿಸಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.