https://youtube.com/shorts/AWyQA9JMFI4?si=6teca9JBs0VZQurx
newsics.com
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಏಪ್ರಿಲ್ 9, 2026 ರಂದು ಫಲಿತಾಂಶ ಹೊರಬೀಳಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ.
ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆದಿದ್ದ ಈ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಏಪ್ರಿಲ್ 9 ರಂದು ಬೆಳಿಗ್ಗೆಯಿಂದಲೇ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) ಈ ಮೊದಲು ಏಪ್ರಿಲ್7, 2026 ರಂದು ಫಲಿತಾಂಶ ಪ್ರಕಟಿಸುವ ಬಗ್ಗೆ ಸೂಚನೆ ನೀಡಿತ್ತು. ಆದರೆ, ಇತ್ತೀಚಿನ ವರದಿಗಳ ಪ್ರಕಾರ ಕೆಲವು ತಾಂತ್ರಿಕ ಕಾರಣಗಳು ಅಥವಾ ಚುನಾವಣಾ ನೀತಿ ಸಂಹಿತೆಯ ಕ್ಲಿಯರೆನ್ಸ್ ಬಾಕಿ ಇರುವುದರಿಂದ ಇಂದು(ಏಪ್ರಿಲ್7) ಫಲಿತಾಂಶ ಪ್ರಕಟವಾಗುತ್ತಿಲ್ಲ.