newsics.com
ನವದೆಹಲಿ: ನಾಳೆ ಏಪ್ರಿಲ್ ೯ರಂದು ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ಕೇರಳ, ಅಸ್ಸಾಂ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ನಾಳೆ ಮತದಾನ ನಡೆಯಲಿದೆ. ನಾಳೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.
ಕೇರಳದ 140 ಸ್ಥಾನಗಳು, ಅಸ್ಸಾಂನ 126 ಸ್ಥಾನಗಳು ಹಾಗೂ ಪುದುಚೇರಿಯ 30 ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಏಪ್ರಿಲ್ 7 ರಂದು ಸಂಜೆ 6 ಗಂಟೆಗೆ ಎಲ್ಲಾ ಸಾರ್ವಜನಿಕ ಪ್ರಚಾರ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. 1951 ರ ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 126 ರ ಅಡಿಯಲ್ಲಿ ವಿಧಿಸಲಾದ ಈ ನಿರ್ಬಂಧಗಳು, ಮತದಾನ ಮುಗಿಯುವ ಕೊನೆಯ 48 ಗಂಟೆಗಳ ಮೊದಲು ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಮತ್ತು ಬೆಂಬಲಿಗರು ಸಾರ್ವಜನಿಕ ಸಭೆಗಳು, ರ್ಯಾಲಿಗಳು ಅಥವಾ ಮೆರವಣಿಗೆಗಳನ್ನು ಆಯೋಜಿಸುವುದನ್ನು ಅಥವಾ ಭಾಗವಹಿಸುವುದನ್ನು ನಿಷೇಧಿಸಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
https://www.newsics.com/2026/04/08/young-theater-artist-television-actor-commits-suicide/