Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಣಿಕ್ಯಧಾರಾ ಫಾಲ್ಸ್ ಬಳಿ ಪಾಲಕ್ಕಾಡ್‌ನ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ!
ಕರ್ನಾಟಕದೇಶಪ್ರಮುಖ

ಮಾಣಿಕ್ಯಧಾರಾ ಫಾಲ್ಸ್ ಬಳಿ ಪಾಲಕ್ಕಾಡ್‌ನ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ!

Share
2 Min Read
Manikyadhara Falls
SHARE

 

newsics.com

ಚಿಕ್ಕಮಗಳೂರು: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಧಾರ ಜಲಪಾತದ ಬಳಿ ಕೇರಳದ ಪಾಲಕ್ಕಾಡ್ ಮೂಲದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದು, ಕುಟುಂಬದವರು ಹಾಗೂ ಪೊಲೀಸರು ಹುಟುಕಾಟ ನಡೆಸಿದ್ದಾರೆ.

ನಂದನಾ ನಾಪತ್ತೆಯಾದ ವಿದ್ಯಾರ್ಥಿನಿ. ಸುಮಾರು 40 ಪ್ರವಾಸಿಗರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ, ಕುಟುಂಬ ಸದಸ್ಯರ ಕಣ್ಣೆದುರೇ ಮಂಗಳವಾರ ಸಂಜೆ ನಿಗೂಢವಾಗಿ ಕಾಣೆಯಾಗಿದ್ದಾಳೆ.

ವಿಷಯ ತಿಳಿಯುತ್ತಿದ್ದಂತೆ ಅಖಾಡಕ್ಕಿಳಿದ ಗ್ರಾಮಾಂತರ ಪೊಲೀಸರು ಮತ್ತು ಅರಣ್ಯ ಇಲಾಖೆಯ 30ಕ್ಕೂ ಹೆಚ್ಚು ಸಿಬ್ಬಂದಿ ಮಂಗಳವಾರ ಮಧ್ಯರಾತ್ರಿ 1 ಗಂಟೆಯವರೆಗೆ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ, ದಟ್ಟವಾದ ಮಂಜು ಮತ್ತು ಕತ್ತಲೆಯ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಯಾವುದೇ ಸುಳಿವು ಸಿಗದೆ ತಂಡಗಳು ವಾಪಸ್ಸಾಗಿದ್ದವು.

ಇಂದು (ಬುಧವಾರ) ಬೆಳಗ್ಗಿನಿಂದಲೇ ಶೋಧ ಕಾರ್ಯ ಮತ್ತೆ ಬಿರುಸುಗೊಂಡಿದ್ದು, ಈ ಬಾರಿ ಆಧುನಿಕ ಡ್ರೋನ್ ಕ್ಯಾಮರಾಗಳ ಸಹಾಯದಿಂದ ರಕ್ಷಣಾ ತಂಡಗಳು ಕಾಡಿನ ಒಳಭಾಗಗಳಲ್ಲೂ ಪರಿಶೀಲನೆ ನಡೆಯುತ್ತಿವೆ. ಪಶ್ಚಿಮ ಘಟ್ಟದ ಕಡಿದಾದ ಬೆಟ್ಟಗಳು ಮತ್ತು ದಟ್ಟಾರಣ್ಯದ ಸವಾಲುಗಳ ನಡುವೆಯೂ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಬಾಲಕಿಗಾಗಿ ಜಂಟಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರವಾಸಕ್ಕೆಂದು ಬಂದು ಮಗಳನ್ನೇ ಕಳೆದುಕೊಂಡ ಕುಟುಂಬಸ್ಥರು ಆತಂಕದಲ್ಲಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಬಾಲಕಿಯ ಪತ್ತೆಗಾಗಿ ಸರ್ವ ಪ್ರಯತ್ನಗಳು ನಡೆಯುತ್ತಿವೆ.
ವಿದ್ಯಾರ್ಥಿನಿ ನಂದನಾ ನಾಪತ್ತೆ ಕುರಿತು ಅವರ ಪೋಷಕರು ಠಾಣೆಗೆ ಬಂದು ದೂರು ನೀಡಿದ್ದಾರೆ. ನಿನ್ನೆ ಎಲ್ಲರ ಜೊತೆ ಫೋಟೋ ತೆಗೆಸಿಕೊಂಡು ಬೆಟ್ಟದ ಮೇಲೆ ಬರುವ ವೇಳೆ ನಂದನಾ ಕಾಣೆಯಾಗಿರುವುದಾಗಿ ಆಕೆಯ ಪೋಷಕರು ನೋವು ತೋಡಿಕೊಂಡಿದ್ದಾರೆ. ಕೇರಳದಿಂದ ಒಟ್ಟು 40 ಜನರು ಪ್ರವಾಸಕ್ಕೆಂದು ಈ ಭಾಗಕ್ಕೆ ಬಂದಿದ್ದು, ಇದರಲ್ಲಿ ಅವರ ನೆರೆಹೊರೆಯವರು ಹಾಗೂ ಸಂಬಂಧಿಕರು ಹೆಚ್ಚಾಗಿದ್ದಾರೆ. ಸದ್ಯ ಅರಣ್ಯ ಇಲಾಖೆ, ಅಗ್ನಿಶಾಮಕ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ವಿದ್ಯಾರ್ಥಿನಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಬಾಲಕಿಯು ನಿನ್ನ ನಾಪತ್ತೆಯಾದ ಸ್ಥಳದಿಂದ ಹೋಗಿರಬಹುದಾದ ಮಾರ್ಗದ ಅಂದಾಜಿನಲ್ಲಿ ಅಧಿಕಾರಿಗಳು ತಂಡಗಳಾಗಿ ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ. ಡ್ರೋಣ್ ಕಾರ್ಯಾಚರಣೆ ಕೂಡ ಮಾಡುತ್ತಿದ್ದು, ಇಂದು ಕೂಡ ವಿದ್ಯಾರ್ಥಿನಿಯ ಹುಡುಕಾಟಕ್ಕಾಗಿ ಕಾರ್ಯಾಚರಣೆ ಮುಂದುವರಿಸಲಾಗುತ್ತದೆ ಎಂದಿದ್ದಾರೆ.
https://www.newsics.com/2026/04/08/beloved-hanged-himself-knowing-the-thought-the-lover-committed-suicide/
https://www.newsics.com/2026/04/08/young-theater-artist-television-actor-commits-suicide/
https://www.newsics.com/2026/04/08/father-son-lockup-death-case-tight-security-for-revathi-who-exposed-the-brutality-of-the-khaki-force/
TAGGED:A 10th grade student from Palakkad goes missing near Manikyadhara Falls!
Share This Article
Facebook Twitter Copy Link Print
Previous Article ಕಾಫಿ ರಫ್ತು ಸ್ಥಗಿತಗೊಂಡು ಕಂಗಾಲಾದ ಬೆಳೆಗಾರ; ಶೇ 20ರಷ್ಟು ಕುಸಿದ ದರ
Next Article ಕದನ ವಿರಾಮ ಬೆನ್ನಲ್ಲೇ ದಿಢೀರ್​​​​ ಏರಿಕೆ ಕಂಡ ಚಿನ್ನ ಹಾಗೂ ಬೆಳ್ಳಿ ಬೆಲೆ!

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?