newsics.com
ಜಬಲ್ಪುರ್: ಮುಸ್ಲಿಂ ಪರ್ಸನಲ್ ಲಾ ಅನ್ವಯ ಮುಸ್ಲಿಂ ಪುರುಷನು ಮೊದಲ ಪತ್ನಿ ಬದುಕಿರುವಾಗಲೇ ಎರಡನೇ ಮದುವೆಯಾಗುವುದು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ದ್ವಿಪತ್ನಿತ್ವ ಅಥವಾ ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ವಿವಾಹವಾಗಿ 20 ವರ್ಷಗಳ ನಂತರ, ತನಗೆ ಮಕ್ಕಳಾಗಿಲ್ಲ ಎಂಬ ಕಾರಣ ನೀಡಿ ಪತಿ ತನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಾನೆ ಮತ್ತು ಎರಡನೇ ಮದುವೆಯಾಗಲು ತನಗೆ ವಿಚ್ಛೇದನ ನೀಡುವಂತೆ ಒತ್ತಾಯಿಸುತ್ತಿದ್ದಾನೆ ಎಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ತನ್ನ ಮೇಲೆ ದಾಖಲಾದ ದ್ವಿಪತ್ನಿತ್ವದ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ಪತಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಪಿ. ಶರ್ಮಾ ನೇತೃತ್ವದ ಏಕಸದಸ್ಯ ಪೀಠವು ಈ ಕೆಳಗಿನ ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ತೀರ್ಪು ಪ್ರಕಟಿಸಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ರ ಅಡಿಯಲ್ಲಿರುವ ದ್ವಿಪತ್ನಿತ್ವದ ನಿಯಮಗಳು ಮುಸ್ಲಿಂ ಪುರುಷರಿಗೆ ಅನ್ವಯಿಸುವುದಿಲ್ಲ ಎಂದು ಕೋರ್ಟ್ ತಿಳಿಸಿದೆ.